Homeರಾಜ್ಯಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ಶೀಘ್ರವೇ ಕಾಲುವೆಗಳ ಮೂಲಕ ನೀರು

ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ಶೀಘ್ರವೇ ಕಾಲುವೆಗಳ ಮೂಲಕ ನೀರು

Water to be released through canals from Almatti and Narayanpur reservoirs soon

ಬೆಂಗಳೂರು,ಜು.25- ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆಯಾ ಗುತ್ತಿರುವ ಹಿನ್ನೆಲೆಯಲ್ಲಿ, ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ಶೀಘ್ರವೇ ಕಾಲುವೆಗಳ ಮೂಲಕ ನೀರು ಹರಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಭಾರೀ ಮಳೆಯಾಗುತ್ತಿರುವ ಕಾರಣ, ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಈ ಬೆಳವಣಿಗೆಯಿಂದಾಗಿ ಕೃಷ್ಣಾ ಮೇಲ್ದಂಡೆ ಯೋಜನೆ (ಏಃಎಓಐ) ವ್ಯಾಪ್ತಿಯ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಬೆಳೆಗಳಿಗೆ ಕಾಲುವೆಗಳ ಮೂಲಕ ನೀರಿ ಹರಿಸಲು ಮುಂದಾಗಿರುವುದು ಈ ಭಾಗದ ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿದೆ.

ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಹಾಗೂ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಮತ್ತು ಜಲಸಂಪನೂಲ ಸಚಿವ ರಾಮಲಿಂಗ ರೆಡ್ಡಿ ಅವರು ಶೀಘ್ರದಲ್ಲೇ ಸಭೆ ನಡೆಸಿ, ಕೃಷಿ ಚಟುವಟಿಕೆಗಳಿಗೆ ಕಾಲುವೆಗಳ ಮೂಲಕ ನೀರು ಬಿಡುಗಡೆ ಮಾಡುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮುಂಗಾರು ಚುರುಕುಗೊಂಡಿರುವ ಕಾರಣ, ಜಲಾಶಯಗಳತ್ತ ನೀರಿನ ಹರಿವು ಹೆಚ್ಚಾಗಿದ್ದು, ಕೃಷಿ ಸಂಕಷ್ಟದಲ್ಲಿದ್ದ ಅನ್ನದಾತರಿಗೆ ದೊಡ್ಡ ಮಟ್ಟದ ನಿರಾಳತೆ ದೊರೆತಿದೆ.

ಕಳೆದ ಕೆಲವು ಅವಧಿಗಳಲ್ಲಿ ಮಳೆಯ ಕೊರತೆ ಹಾಗೂ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿದಿದ್ದರಿಂದ ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಬೆಳೆಗಳಿಗೆ ನೀರು ಒದಗಿಸುವುದು ಸವಾಲಾಗಿ ಪರಿಣಮಿತ್ತು. ಆದರೆ, ಪ್ರಸ್ತುತ ಮಹಾರಾಷ್ಟ್ರದ ಮಳೆಯಿಂದಾಗಿ ಒಳಹರಿವು ಸುಧಾರಿಸುತ್ತಿರುವುದು ರೈತರ ಬೆಳೆ ಸಂರಕ್ಷಣೆಗೆ ಆಶಾಕಿರಣವಾಗಿದೆ.

ಕೃಷ್ಣಾ ಮೇಲ್ದಂಡೆ ಯೋಜನೆಯ ಆಶ್ರಿತ ಪ್ರದೇಶದ ಲಕ್ಷಾಂತರ ಎಕರೆ ಜಮೀನುಗಳಿಗೆ ಕಾಲುವೆಗಳ ಮೂಲಕ ಸಮರ್ಪಕವಾಗಿ ನೀರು ತಲುಪಿಸಲು ಅಗತ್ಯವಿರುವ ತಾಂತ್ರಿಕ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಲಸಂಪನೂಲ ಸಚಿವರು ಈಗಾಗಲೇ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಚಿವರಾದ ಎಂ.ಬಿ. ಪಾಟೀಲ್‌ ಮತ್ತು ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಜರುಗಲಿರುವ ಈ ಮಹತ್ವದ ಸಭೆಯ ಬಳಿಕ, ಕಾಲುವೆಗಳಿಗೆ ನೀರು ಹರಿಸುವ ದಿನಾಂಕ ಅಧಿಕೃತವಾಗಿ ಹೊರಬೀಳುವ ಸಾಧ್ಯತೆಯಿದ್ದು, ಒಣಗುತ್ತಿರುವ ಬೆಳೆಗಳಿಗೆ ಜೀವಕಳೆ ಬರಲಿದೆ ಎಂದು ನಿರೀಕ್ಷಿಸಲಾಗಿದೆ.

RELATED ARTICLES

Latest News