ಲಖಿಸಾರೈ,ಫೆ.21- ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿ 6ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಲಖಿಸರಾಯ್‍ನ ರಾಮಗಢ್ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ಬಿಹರೌರಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತರ ಪೈಕಿ ದಿವಾನ ಕುಮಾರ್, ಛೋಟು ಕುಮಾರ್, ಅಮಿತ್ ಕುಮಾರ್ ಮತ್ತು ರಾಮು ಕುಮಾರ್ ಎಬುವರನ್ನು ಗುರುತಿಸಲಾಗಿದೆ.
ಇವರೆಲ್ಲರೂ ಮುಂಗೇರ್ ಜಿಲ್ಲೆಯ ಜಮಾಲ್‍ಪುರದ ನಯಾ ತೋಲಾ ಕೇಶೋಪುರ ನಿವಾಸಿಗಳಾಗಿದ್ದರು. ಇನ್ನು ಬಾಕಿಯುಳಿದ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಭಯಾನಕ ಅಪಘಾತದಲ್ಲಿ 6ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪರಿಚಿತ ವಾಹನವೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಹಾರಿ ಹೋಗಿ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದರೆ, ಗಂಭೀರವಾಗಿ ಗಾಯಗೊಂಡವರು ಎಲ್ಲೆಂದರಲ್ಲಿ ಬಿದ್ದಿದ್ದಾರೆ.
ಸರ್ವೀಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಇನ್ಸ್‌ಪೆಕ್ಟರ್ ಆತ್ಮಹತ್ಯೆ
ಸಿಕ್ಕಿರುವ ಮಾಹಿತಿ ಪ್ರಕಾರ, ಲಖಿಸರಾಯ್-ಸಿಕಂದ್ರ ಮುಖ್ಯ ರಸ್ತೆಯ ಬಿಹರೌರಾ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಆಟೋದಲ್ಲಿ ಒಟ್ಟು 15 ಜನರಿದ್ದು, ಈ ಪೈಕಿ 9 ಮಂದಿ ಸಾವನ್ನಪ್ಪಿದ್ದಾರೆ. ಉಳಿದ ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಉತ್ತಮ ಚಿಕಿತ್ಸೆಗಾಗಿ ಪಾಟ್ನಾಗೆ ಕಳುಹಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಹಲವು ಠಾಣೆಗಳ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗೆ ಕಳುಹಿಸಿದ್ದಾರೆ ಎಂದು ತಿಳಿದುಬ ಬಂದಿದೆ.
ಅಪಘಾತದಲ್ಲಿ ಗಾಯಗೊಂಡ ಆಟೋ ಚಾಲಕ ಮನೋಜ್ ಕುಮಾರ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೊಲೀಸರು ಅವರ ಮೊಬೈಲ್ ಫೋನ್‍ಗಳ ಆಧಾರದ ಮೇಲೆ ಅವರ ಕುಟುಂಬಗಳಿಗೆ ಮಾಹಿತಿ ನೀಡಿ ಮೃತರ ಪತ್ತೆಗೆ ಪ್ರಯತ್ನಿಸುತ್ತಿದ್ದಾರೆ. ಏತನ್ಮಧ್ಯೆ, ಕೆಲವು ಗಾಯಾಳುಗಳನ್ನು ಗುರುತಿಸಲಾಗಿದೆ, ಪಚ್ನಾ ರಸ್ತೆಯ ಸಾಗರ್ ಯಾದವ್, ಲಖಿಸಾರೈ ಮತ್ತು ಮುಂಗೇರ್ ಜಮಾಲ್ಪುರದ ಹೃತಿಕ್ ಕುಮಾರ್ ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ಪೊಲೀಸರು ಹಾಗೂ ಜನ ಜಮಾಯಿಸಿದ್ದರು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.