Friday, December 12, 2025
Homeಇದೀಗ ಬಂದ ಸುದ್ದಿಔತಣಕೂಟದಲ್ಲಿ ಊಟದ ಹೊರತಾಗಿ ರಾಜಕೀಯ ಮಾಡಿಲ್ಲ : ಡಿಕೆಶಿ

ಔತಣಕೂಟದಲ್ಲಿ ಊಟದ ಹೊರತಾಗಿ ರಾಜಕೀಯ ಮಾಡಿಲ್ಲ : ಡಿಕೆಶಿ

No politics in dinner meeting : DK Shivkumar

ಬೆಳಗಾವಿ, ಡಿ.12- ವಿಶ್ವಾಸಕ್ಕೆ ಊಟದ ವ್ಯವಸ್ಥೆ ಮಾಡಿದಾಗ ಬರುವುದಿಲ್ಲ ಎಂದು ಹೇಳಲಾಗುವುದಿಲ್ಲ. ಆದರೆ ಅಲ್ಲಿ ಊಟದ ಹೊರತಾಗಿ ರಾಜಕೀಯ ಸಭೆಗಳು ನಡೆಯುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಇಲ್ಲಿನ ಸರ್ಕ್ಯೂಟ್‌ ಹೌಸ್‌‍ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯವಾಗಿರುವ ಮುಖಂಡರು ದಿನಕ್ಕೊಬ್ಬರಂತೆ ಊಟಕ್ಕೆ ಕರೆಯುತ್ತಿದ್ದಾರೆ. ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಊಟವನ್ನು ಬೇಡ ಎನ್ನಲು ಆಗುತ್ತದೆಯೇ? ಎಂದು ಮರು ಪ್ರಶ್ನಿಸಿದರು.

ನನ್ನ ಕ್ಷೇತ್ರದ ಹುಡುಗನೊಬ್ಬ ಇಲ್ಲಿ ಕೆಲಸ ಮಾಡುತ್ತಿದ್ದಾನೆ. ಆತನ ಮನೆಯಿಂದ ಇವತ್ತು ಮುದ್ದೆ, ಉಪ್ಸಾರು ಊಟ ಮಾಡಿ ಕಳುಹಿಸುತ್ತೇವೆ ಎನ್ನುತ್ತಿದ್ದಾನೆ. ಹೀಗೇ ಅವರು ಪ್ರೀತಿಯಿಂದ ಹೇಳಿದಾಗ, ಕರೆದಾಗ ಬೇಡ ಎನ್ನಲು ಆಗುತ್ತದೆಯೇ? ನಾಳಿದ್ದು ನಮ ಆಸೀಫ್‌ ಸೇಠ್‌, ಫಿರೋಜ್‌ ಸೇಠ್‌ ಅವರು ಊಟಕ್ಕೆ ಕರೆದಿದ್ದಾರೆ ಎಂದರು.

ದೊಡ್ಡಣ್ಣನವರ ಬೆಳಗಾವಿ ಜಿಲ್ಲಾ ಕಾಂಗ್ರೆಸ್‌‍ ನ ಮಾಜಿ ಅಧ್ಯಕ್ಷರು. ನನ್ನ ಸ್ನೇಹಿತರೂ ಹೌದು. ಅವರದು ದೊಡ್ಡ ಕುಟುಂಬ. ಕಳೆದ 15 ವರ್ಷಗಳಿಂದ ನಮ ಮನೆಗೆ ಊಟಕ್ಕೆ ಬನ್ನಿ ಎಂದು ಕರೆಯುತ್ತಿದ್ದರು. ನಮ ಕಾಂಗ್ರೆಸ್‌‍ ಕುಟುಂಬದವರನ್ನು ಮರೆಯಲು ಆಗುತ್ತದೆಯೇ? ಹೀಗಾಗಿ ನಾನೂ ಸೇರಿದಂತೆ ಒಂದಷ್ಟು ಜನರು ಊಟಕ್ಕೆ ಹೋಗಿದ್ದೆವು, ಅಷ್ಟೇ. ಅದರಲ್ಲಿ ಯಾವ ಔತಣಕೂಟವೂ ಇಲ್ಲ, ಏನೂ ಇಲ್ಲ ಎಂದು ಹೇಳಿದರು.

ಬೆಂಗಳೂರಿನಲ್ಲೇ ಐಪಿಎಲ್‌:
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಲಾಗಿದೆ. ಬೆಂಗಳೂರಿನ ಗೌರವ ಉಳಿಸಲು ನಾವು ಅಗತ್ಯ ಕ್ರಮ ಕೈಗೊಂಡಿದ್ದೇವೆ. ಮುಂದೆ ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದೇವೆ ಎಂದು ತಿಳಿಸಿದರು.

ಈ ವಿಚಾರದಲ್ಲಿ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಜವಾಬ್ದಾರಿಯನ್ನು ಗೃಹ ಸಚಿವ ಪರಮೇಶ್ವರ್‌ ಅವರಿಗೆ ವಹಿಸಲಾಗಿದೆ. ಕೆ.ಎಸ್‌‍.ಸಿ.ಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌ ಅವರ ತಂಡ ಹಾಗೂ ಪೊಲೀಸ್‌‍ ಅಧಿಕಾರಿಗಳು ಕೂತು ಚರ್ಚೆ ಮಾಡಲಿದ್ದಾರೆ ಎಂದು ತಿಳಿಸಿದರು.

RELATED ARTICLES

Latest News