Friday, November 22, 2024
Homeಬೆಂಗಳೂರುಬೆಂಗಳೂರಿಗರಿಗೆ ಗುಡ್ ನ್ಯೂಸ್ : ಬಿಬಿಎಂಪಿ ಆಸ್ತಿ ತೆರಿಗೆ ದಂಡ ಶೇ.50 ಕಡಿತ

ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಬಿಬಿಎಂಪಿ ಆಸ್ತಿ ತೆರಿಗೆ ದಂಡ ಶೇ.50 ಕಡಿತ

ಬೆಂಗಳೂರು,ಫೆ.22- ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಮೇಲಿನ ದಂಡದ ಪ್ರಮಾಣ ಶೇ.50ರಷ್ಟು ಕಡಿತ ಮತ್ತು ತೆರಿಗೆದಾರರಿಗೆ ಅನುಕೂಲ ವಾಗುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ತಿದ್ದುಪಡಿ) ವಿಧೇಯಕ 2024 ಅನ್ನು ವಿಧಾನಪರಿಷತ್‍ನಲ್ಲಿ ಅಂಗೀಕರಿಸಲಾಯಿತು.

ಈಗಾಗಲೇ ವಿಧಾನಸಭೆಯಲ್ಲಿ ಅಂಗೀಕೃತವಾಗಿದ್ದ ವಿಧೇಯಕವನ್ನು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧೇಯಕವನ್ನು ಮಂಡಿಸಿ ಅಂಗೀಕರಿಸಬೇಕೆಂದು ಸದನದ ಸದಸ್ಯರಿಗೆ ಮನವಿ ಮಾಡಿದರು. ಸದನದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಚರ್ಚೆ ನಡೆದ ನಂತರ ಸಭಾಪತಿ ಬಸವರಾಜ ಹೊರಟ್ಟಿ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ತಿದ್ದುಪಡಿ ವಿಧೇಯಕ) 2024 ಅನ್ನು ಧ್ವನಿಮತದ ಮೂಲಕ ಅಂಗೀಕರಿಸಿದರು.

ಇದಕ್ಕೂ ಮುನ್ನ ವಿಧೇಯಕ ಮಂಡಿಸಿ ಮೊದಲು ಮಾತನಾಡಿದ ಡಿ.ಕೆ.ಶಿವಕುಮಾರ್, ವಿಧೇಯಕದಿಂದ ಬೆಂಗಳೂರು ನಾಗರಿಕರಿಗೆ ತೆರಿಗೆ, ದಂಡ, ವಿನಾಯ್ತಿ ಸೇರಿ ಸುಮಾರು 2700 ಕೋಟಿ ರೂ.ಗಳಷ್ಟು ಅನುಕೂಲವಾಗಲಿದೆ. ಜೊತೆಗೆ ಬಿಬಿಎಂಪಿಗೆ ಒಂದು ಸಾವಿರ ಕೋಟಿ ರೂ.ನಷ್ಟು ಆಸ್ತಿ ತೆರಿಗೆ ಬರಲಿದೆ ಎಂದು ಹೇಳಿದರು. ಸುಮಾರು 5.51 ಲಕ್ಷ ತೆರಿಗೆ ಬಾಕಿದಾರರು 5ರಿಂದ 7 ಲಕ್ಷ ತೆರಿಗೆ ವ್ಯಾಪ್ತಿಗೆ ಬಾರದವರು ಸೇರಿದಂತೆ 13ರಿಂದ 15 ಲಕ್ಷ ಜನರಿಗೆ ಈ ವಿಧೇಯಕದಿಂದ ಅನುಕೂಲವಾಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

ಬಡ ಹಾಗೂ ದುರ್ಬಲ ವರ್ಗದವರಿಗೆ ವಿಧೇಯಕದಲ್ಲಿ ವಿಶೇಷ ವಿನಾಯಿತಿ ನೀಡಲಾಗಿದೆ. ಸರ್ಕಾರದ ವಸತಿ ಯೋಜನೆಯ ಆಸ್ತಿಗಳು ಹಾಗೂ ಕೊಳಗೇರಿ ಪ್ರದೇಶದ ಕಟ್ಟಡಗಳಿಗೆ ಬಡ್ಡಿ ಮೇಲಿನ ದಂಡ ಇರುವುದಿಲ್ಲ. ಒಂದು ಸಾವಿರ ಚದರ ಅಡಿವರೆಗಿನ ಸ್ವಯಂ ಬಳಕೆ ಆಸ್ತಿದಾರರಿಗೆ ಸಂಪೂರ್ಣ ದಂಡ ವಿನಾಯಿತಿ ನೀಡಲಾಗಿದೆ. ವಸತಿ ಮತ್ತು ಮಿಶ್ರ ಆಸ್ತಿದಾರರ (ವಸತಿ ಮತ್ತು ವಾಣಿಜ್ಯ) ಬಾಕಿಯನ್ನು ಎಷ್ಟೇ ವರ್ಷದಿಂದ ಉಳಿಸಿಕೊಂಡಿದ್ದರೂ ಹಿಂದಿನ 5 ವರ್ಷಕ್ಕೆ ಮಾತ್ರ ಲೆಕ್ಕಾಚಾರ ಮಾಡಲು ನಿರ್ಧರಿಸಲಾಗಿದೆ. 5 ವರ್ಷಕ್ಕಿಂತ ಹಿಂದಿನ ಅವಧಿಗೆ ಬಡ್ಡಿ ಮನ್ನಾ ಮಾಡಲಾಗಿದೆ ಎಂದು ವಿವರಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಹಾಗೂ ಸ್ವಯಂ ಘೋಷಿತ ಆಸ್ತಿ ತೆರಿಗೆ (ಎಸ್‍ಎಎಸ್) ಪದ್ಧತಿ ಅಡಿಯಲ್ಲಿ ತಪ್ಪು ಮಾಹಿತಿ ನೀಡಿದವರಿಗೆ ಬಿಬಿಎಂಪಿ ಕಾಯ್ದೆ 2020ರ ಪ್ರಕಾರ ನೋಟಿಸ್ ನೀಡುವುದರ ಜತೆಗೆ ಭಾರಿ ದಂಡ, ಬಡ್ಡಿ ವಿಸುವುದು ಹಾಗೂ ಆಸ್ತಿ ಜಪ್ತಿ ಮಾಡುವುದಕ್ಕೆ ಅವಕಾಶವಿತ್ತು. ಅದರಂತೆ ಬಿಬಿಎಂಪಿ ಕಂದಾಯ ವಿಭಾಗ 60 ಸಾವಿರಕ್ಕೂ ಹೆಚ್ಚಿನ ಆಸ್ತಿಗೆ ನೋಟಿಸ್ ನೀಡಿದ್ದಲ್ಲದೆ, 10 ಸಾವಿರಕ್ಕೂ ಹೆಚ್ಚಿನ ಆಸ್ತಿಗಳಿಗೆ ಬೀಗಮುದ್ರೆ ಹಾಕಿತ್ತು. ಬಿಬಿಎಂಪಿಯ ಈ ಕ್ರಮದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಅದನ್ನು ಮನಗಂಡ ಸರ್ಕಾರ ಬಿಬಿಎಂಪಿ ಕಾಯ್ದೆ 2020ಕ್ಕೆ ತಿದ್ದುಪಡಿ ತಂದಿದ್ದು, ಅದನ್ನು ಅಧಿವೇಶನದಲ್ಲಿ ಮಂಡಿಸಿತ್ತು.

ಕಂದಾಯ ಅಧಿಕಾರಿಗಳು ನಿಗದಿ ಮಾಡಲಾಗಿದ್ದ ಗುರಿಯಂತೆ ತೆರಿಗೆ ವಸೂಲಿ ಮಾಡಿಲ್ಲ. ತಮ್ಮ ವ್ಯಾಪ್ತಿಯಲ್ಲಿ ತೆರಿಗೆ ಬಾಕಿ ಉಳಿಸಿಕೊಂಡಿರುವ 50 ಆಸ್ತಿದಾರರ ಪಟ್ಟಿಯನ್ನು ಸಮರ್ಪಕವಾಗಿ ಮಾಡಿಲ್ಲ. ಮೇಲಧಿಕಾರಿಗಳು ನೀಡಿರುವ ಸೂಚನೆಯನ್ನು ಕಂದಾಯ ಅಧಿಕಾರಿಗಳು ಪಾಲಿಸಿಲ್ಲ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಬೈಜೂಸ್ ಸಂಸ್ಥಾಪಕ ರವೀಂದ್ರನ್ ವಿರುದ್ಧ ED ಲುಕೌಟ್ ನೋಟಿಸ್ ವಿಸ್ತರಣೆ

ವಸತಿ ಮತ್ತು ಮಿಶ್ರ ಆಸ್ತಿದಾರರ (ವಸತಿ ಮತ್ತು ವಾಣಿಜ್ಯ) ಬಾಕಿಯನ್ನು ಎಷ್ಟೇ ವರ್ಷದಿಂದ ಉಳಿಸಿಕೊಂಡಿದ್ದರೂ ಹಿಂದಿನ 5 ವರ್ಷಕ್ಕೆ ಮಾತ್ರ ಲೆಕ್ಕಾಚಾರ ಹಾಕಲು ನಿರ್ಧರಿಸಲಾಗಿದೆ. 5 ವರ್ಷಕ್ಕಿಂತ ಹಿಂದಿನ ಅವಧಿಗೆ ಬಡ್ಡಿ ಮನ್ನಾ ಮಾಡಲಾಗಿದೆ. ಇದೊಂದು ಜನಸ್ನೇಹಿ ತಿದ್ದುಪಡಿಯಾಗಿದ್ದು, ಸರಕಾರಕ್ಕೆ ನಷ್ಟವಾದರೂ ಪರವಾಗಿಲ್ಲ, ಜನರಿಗೆ ಅನುಕೂಲವಾಗಲಿ ಎಂದು ಈ ಕಾನೂನನ್ನು ಜಾರಿಗೆ ತರಲಾಗಿದೆ ಎಂದು ಶಿವಕುಮಾರ್ ತಿಳಿಸಿದರು.

ಹಿಂದಿನ ಬಿಜೆಪಿ ಸರಕಾರ ತಂದಿದ್ದ ತಿದ್ದುಪಡಿ ವಿಧೇಯಕ ಅಂಗೀಕಾರದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡ ತೆರಿಗೆ ಮೇಲೆ ದುಪ್ಪಟ್ಟು ದಂಡ ಪಾವತಿಸಬೇಕಾಗಿ ಬಂದು ಬೆಂಗಳೂರು ನಾಗರಿಕರು ತೀವ್ರ ಸಂಕಷ್ಟಕ್ಕೆ ಸಿಕ್ಕಿದ್ದರು. ತೆರಿಗೆ ಮೊತ್ತಕ್ಕಿಂತ ದಂಡದ ಪ್ರಮಾಣವೇ ಸಿಕ್ಕಾಪಟ್ಟೆ ಹೆಚ್ಚಾಗಿತ್ತು. ಈಗ ಸರಕಾರವು ಹಿಂದಿನ ಸರ್ಕಾರ ಅಂಗೀಕರಿಸಿದ್ದ ಕಾಯ್ದೆಗೆ ತಿದ್ದುಪಡಿ ತಂದು ನಾಗರಿಕರ ತೆರಿಗೆ ಹೊರೆ ಕಡಿಮೆ ಮಾಡಿದೆ ಎಂದು ಅವರು ಹೇಳಿದರು.

ಇದಕ್ಕೂ ಮುನ್ನ ವಿಧೇಯಕದ ಮೇಲೆ ಸದಸ್ಯರಾದ ಟಿ.ಎ.ಶರವಣ, ನಾಗರಾಜ್ ಯಾದವ್, ನವೀನ್, ಗೋಪಿನಾಥ್ ಸೇರಿದಂತೆ ಹಲವು ಸದಸ್ಯರು ಮಾತನಾಡಿ, ಸರ್ಕಾರಕ್ಕೆ ವಿಧೇಯಕದಲ್ಲಿರುವ ಕೆಲವು ಅಂಶಗಳನ್ನು ತಿದ್ದುಪಡಿ ಮಾಡಬೇಕೆಂದು ಮನವಿ ಮಾಡಿದರು.

RELATED ARTICLES

Latest News