Homeರಾಜ್ಯಈ ಬಾರಿ ದಸರಾದಲ್ಲಿ ವಿಐಪಿಗಳ ಉಚಿತ ಗೋಲ್ಡ್ ಪಾಸ್‌‍ ರದ್ದು

ಈ ಬಾರಿ ದಸರಾದಲ್ಲಿ ವಿಐಪಿಗಳ ಉಚಿತ ಗೋಲ್ಡ್ ಪಾಸ್‌‍ ರದ್ದು

No complimentary Dasara Gold passes for VIPs

ಮೈಸೂರು,ಜು.28- ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಗೋಲ್ಡ್ ಪಾಸ್‌‍ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಜಾರಿಯಾಗಲಿದೆ. ವಿಐಪಿಗಳಿಗೆ ಉಚಿತ ಗೋಲ್ಡ್ ಪಾಸ್‌‍ ನೀಡದಿರಲು ಸರ್ಕಾರ ನಿರ್ಧರಿಸಿದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ಧರಾಮಯ್ಯ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ನಡೆದ ದಸರಾ ಕಾರ್ಯಕಾರಿ ಸಮಿತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ದಸರಾವನ್ನು ಇನ್ನಷ್ಟು ವೈಭವದಿಂದ ಆಚರಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಹೇಳಿದರು.

ಸಾರ್ವಜನಿಕರಿಗೆ ಮಾತ್ರ ಪಾಸ್‌‍ :
ಈ ಬಾರಿ ಆಸನಗಳ ಸಂಖ್ಯೆಗೆ ಅನುಗುಣವಾಗಿ ಮಾತ್ರ ಗೋಲ್ಡ್ ಪಾಸ್‌‍ ಮುದ್ರಿಸಲಾಗುವುದು. ಹಣ ಪಾವತಿಸಿ ಖರೀದಿಸುವ ಸಾರ್ವಜನಿಕರಿಗೆ ಮಾತ್ರ ಪಾಸ್‌‍ ನೀಡಲಾಗುವುದು. ವಿಐಪಿಗಳಿಗೆ ಉಚಿತ ಗೋಲ್‌್ಡ ಪಾಸ್‌‍ ನೀಡುವ ಪದ್ಧತಿಯನ್ನು ಕೈಬಿಡಲಾಗಿದೆ ಎಂದು ಸ್ಪಷ್ಟಪಡಿಸಿದರು.

17 ಉಪಸಮಿತಿ ರಚನೆ :
ದಸರಾ 2026ರ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದೆ. ಪ್ರತಿ ಉಪಸಮಿತಿಗೂ ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ನೀಡಲಾಗಿದೆ.ಕರಾವಳಿ ಭಾಗದ ಜನಪ್ರಿಯ ಜಾನಪದ ಕ್ರೀಡೆ ಕಂಬಳವನ್ನು ಈ ಬಾರಿ ಆಯೋಜಿಸುವ ಕುರಿತು ಚರ್ಚೆ ನಡೆಯುತ್ತಿದೆ. ಅದು ಅಂತಿಮಗೊಂಡರೆ 18ನೇ ಉಪಸಮಿತಿ ರಚಿಸಲಾಗುವುದು. ಚಾಮುಂಡಿ ಬೆಟ್ಟದ ತಪ್ಪಲಿನ ಸೈಕ್ಲಿಂಗ್‌ ವೆಲೋಡ್ರೋಮ್‌ ಪ್ರದೇಶವನ್ನು ಸ್ಥಳವಾಗಿ ಪರಿಶೀಲಿಸಲಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ದಸರಾ ಉದ್ಘಾಟಕರ ಆಯ್ಕೆ ಕುರಿತು ಹಲವು ಗಣ್ಯರ ಹೆಸರುಗಳು ಶಾಸಕರಿಂದ ಬಂದಿವೆ. ಅಂತಿಮ ಆಯ್ಕೆಯನ್ನು ಮುಖ್ಯಮಂತ್ರಿ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

ಸಂಚಾರಕ್ಕೆ ಅನುಕೂಲ :
ನಗರದಲ್ಲಿ ನಡೆಯುತ್ತಿರುವ ಫ್ಲೈಓವರ್‌, ವೈಟ್ಟಾಪಿಂಗ್‌ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ದಸರಾ ವೇಳೆಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ. ಪೂರ್ಣಗೊಳ್ಳದ ಕಾಮಗಾರಿಗಳನ್ನು ಹಬ್ಬದ ಅವಧಿಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗುವುದು.

ಈ ಬಾರಿ ಡ್ರೋನ್‌ ಶೋವನ್ನು ಇನ್ನಷ್ಟು ವಿನೂತನವಾಗಿ ಆಯೋಜಿಸಲಾಗುವುದು. ಕೇಂದ್ರ ಸರ್ಕಾರದ ಅನುಮತಿ ದೊರೆತರೆ ಏರ್‌ ಶೋ ನಡೆಸುವ ಪ್ರಯತ್ನವೂ ನಡೆಯುತ್ತಿದೆ ಎಂದು ಸಚಿವರು ಹೇಳಿದರು. ದಸರಾ ಮತ್ತು ಎಸ್‌‍ಐಆರ್‌ ಕೆಲಸಗಳಲ್ಲಿ ಅಧಿಕಾರಿಗಳು ನಿರತರಾಗಿದ್ದರೂ, ಸಾರ್ವಜನಿಕರ ದೈನಂದಿನ ಕೆಲಸಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

RELATED ARTICLES

Latest News