Friday, November 22, 2024
Homeರಾಜ್ಯಸಿದ್ದು ದ್ವಿಮುಖ ನೀತಿ: ವಿಜಯೇಂದ್ರ ಟೀಕೆ

ಸಿದ್ದು ದ್ವಿಮುಖ ನೀತಿ: ವಿಜಯೇಂದ್ರ ಟೀಕೆ

ಬೆಂಗಳೂರು ಫೆ.23- ಕೇಂದ್ರ ಬಿಜೆಪಿ ಸರಕಾರವನ್ನು ಮತ್ತು ನರೇಂದ್ರ ಮೋದಿಯವರನ್ನು ನಿರಂತರವಾಗಿ ಟೀಕಿಸುವ ರಾಜ್ಯದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ದ್ವಿಮುಖ ನೀತಿಯನ್ನು ಅನಾವರಣಗೊಳಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಟೀಕಿಸಿದರು.
ಮಲ್ಲೇಶ್ವರದ ಹವ್ಯಕ ಭವನದಲ್ಲಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯುತ್ ನಿಯಂತ್ರಣ ಪ್ರಾಧಿಕಾರ ವಿದ್ಯುತ್ ದರ ಏರಿಸಿದೆ ಎನ್ನುವ ಮುಖ್ಯಮಂತ್ರಿಗಳು ಹಣಕಾಸು ಆಯೋಗವು ತೆರಿಗೆ ಹಂಚಿಕೆಯನ್ನು ನಿರ್ಧರಿಸಿದ್ದನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ ಎಂದು ಆಕ್ಷೇಪಿಸಿದರು.

ಮೋದಿಜೀ ಅವರ ಬಗ್ಗೆ ದೇಶ ಮಾತ್ರವಲ್ಲದೆ ಜಗತ್ತಿನಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇದು ಕಾಂಗ್ರೆಸ್ಸಿಗರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು. ದೇಶದ ಹಿತದೃಷ್ಟಿ, ದೇಶದ ರಕ್ಷಣೆಗಾಗಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ಜನರು ಬಯಸಿದ್ದಾರೆ. ರಾಜ್ಯದಲ್ಲೂ 28ಕ್ಕೆ 28 ಸೀಟುಗಳನ್ನು ಬಿಜೆಪಿ- ಜೆಡಿಎಸ್ ಪಕ್ಷಗಳು ಗೆಲ್ಲಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಕಾರ್ಯಕರ್ತರು, ಪ್ರಮುಖರು ಮೋದಿಯವರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬೇಕಿದೆ ಎಂದು ತಿಳಿಸಿದರು.

ಡಾ.ಮಂಜುನಾಥ್ ಸ್ಪರ್ಧೆ ಕುರಿತಂತೆ ಸೂಕ್ತ ಸಮಯದಲ್ಲಿ ನಿರ್ಧಾರ: ಎಚ್‍ಡಿಕೆ

ಬಿಜೆಪಿ ರಾಜ್ಯದಲ್ಲಿ ಎಲ್ಲ 28 ಸ್ಥಾನಗಳನ್ನು ಗೆಲ್ಲಲಿದೆ ಎಂಬ ಆತಂಕ ಕಾಂಗ್ರೆಸ್ ಸರ್ಕಾರಕ್ಕಿದೆ ಈ ದುಷ್ಟ, ಭ್ರಷ್ಟ, ದುರಹಂಕಾರಿ ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸಲು ಮುಂದಾಗಬೇಕು ಎಂದ ಅವರು, ಗೆಲುವಿನ ಸವಾಲನ್ನು ಸವಾಲಾಗಿ ಸ್ವೀಕಾರ ಮಾಡೋಣ ಎಂದು ಕರೆ ನೀಡಿದರು. ಪಂಚರಾಜ್ಯಗಳ ಚುನಾವಣೆಯಲ್ಲಿ ಪಕ್ಷದ ಪರಾಭವದಿಂದ ಕಾಂಗ್ರೆಸ್ ಪಕ್ಷಕ್ಕೆ ಆತಂಕ ಉಂಟಾಗಿದೆ ಎಂದ ಅವರು, ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರು ನಾವೇ ಮೋದಿ ಎಂದು ಭಾವಿಸಿ ಹಗಲಿರುಳೆನ್ನದೆ ದುಡಿಯಬೇಕು. ಅಭ್ಯರ್ಥಿಯ ಬಗ್ಗೆ ತಲೆ ಕೆಡಿಸಿಕೊಳ್ಳದಿರಿ. ಅಭ್ಯರ್ಥಿ ಯಾರೇ ಇದ್ದರೂ ಕಮಲದ ಹೂವನ್ನು ಗೆಲ್ಲಿಸಲು ಮುಂದಾಗಿ ಎಂದು ಮನವಿ ಮಾಡಿದರು.

ಒಬಿಸಿ ಮೋರ್ಚಾದ ಪದಾಧಿಕಾರಿಗಳು ತಾವು ಬಿಜೆಪಿ ಕಾರ್ಯಕರ್ತರು ಎಂಬುದನ್ನು ಮರೆಯಬಾರದು. ಮೋದಿಜೀ ಅವರ ಬಗೆಗಿನ ಹೆಮ್ಮೆಯನ್ನು ಕಾರ್ಯರೂಪಕ್ಕೆ ತರಬೇಕು. ನಮ್ಮ ಪದಾಧಿಕಾರಿಗಳು ತಮ್ಮ ಬೂತ್ ಕಡೆ ಗಮನ ಹರಿಸಬೇಕು. ಮತದಾರರ ಪಟ್ಟಿ, ಬೂತ್ ಕಡೆ ಗಮನ ಕೊಡಬೇಕು. ಎಷ್ಟು ಹೆಸರು ಸೇರ್ಪಡೆ ಆಗಿದೆ. ಎಷ್ಟು ಹೆಸರು ರದ್ದಾಗಿದೆ ಎಂಬ ಕಡೆ ಗಮನಿಸಬೇಕು ಎಂದು ಸೂಚಿಸಿದರು.

100 ಮತ ಬಂದಿದ್ದರೆ ಅದನ್ನು 200 ಮಾಡುವುದು ಹೇಗೆ? 500 ಮತ ಬಂದಿದ್ದರೆ ಅದನ್ನು ಮತ್ತಷ್ಟು ಹೆಚ್ಚಿಸುವ ಕಡೆ ಗಮನ ಹರಿಸಬೇಕಿದೆ. ಕ್ಷೇತ್ರಕ್ಕೆ ತೆರಳಿ ಬೂತ್ ಬಲಪಡಿಸುವ ಕಡೆ ಯೋಜನೆ ಮತ್ತು ಕಾರ್ಯಕ್ರಮ ರೂಪಿಸಬೇಕು ಎಂದು ತಿಳಿಸಿದರು. ಸೂರ್ಯ ಚಂದ್ರ ಇರುವುದು ಹೇಗೆ ಸತ್ಯವೋ ಮೋದಿಜೀ ಅವರು ಮತ್ತೊಮ್ಮೆ ಪ್ರಧಾನಿ ಆಗುವುದೂ ಅಷ್ಟೇ ಸತ್ಯ ಎಂದು ನುಡಿದ ವಿಜಯೇಂದ್ರ ಅವರು, ರಾಜ್ಯದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡತಕ್ಕ ಲೋಕಸಭಾ ಚುನಾವಣಾ ಫಲಿತಾಂಶ ಕರ್ನಾಟಕದಲ್ಲೂ ಬರಲಿದೆ. 28ಕ್ಕೆ 28 ಸ್ಥಾನ ನಮ್ಮದಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಕೇವಲ 8-9 ತಿಂಗಳಲ್ಲಿ ತನ್ನ ಜನಪ್ರಿಯತೆಯನ್ನು ಕಳೆದುಕೊಂಡಿದೆ. ರಾಜ್ಯಕ್ಕೆ ಸಂಬಂಸಿ ಯಾವುದೇ ಅಭಿವೃದ್ಧಿ ಯೋಜನೆಗಳನ್ನು ಅದು ಪ್ರಕಟಿಸಿಲ್ಲ ಎಂದು ಟೀಕಿಸಿದ ಅವರು, ನಮ್ಮ ಸರಕಾರವು ಉತ್ತರ ಕರ್ನಾಟಕದ 7800 ಕೋಟಿ ಮೊತ್ತದ ನೀರಾವರಿ ಯೋಜನೆಗೆ ಅನುಮೋದನೆ ಕೊಟ್ಟಿತ್ತು. ಅದರ ಅನುಷ್ಠಾನಕ್ಕೆ ಕಾಂಗ್ರೆಸ್ ಮುಂದಾಗಿಲ್ಲ. ಖಜಾನೆಯಲ್ಲಿ ದುಡ್ಡಿಲ್ಲದಿರುವುದು ಇದಕ್ಕೆ ಕಾರಣ ಎಂದು ವಿಶ್ಲೇಷಿಸಿದರು.

ಗ್ಯಾರಂಟಿ ಯೋಜನೆಗೆ ಕಾರ್ಮಿಕ ಇಲಾಖೆಯ ಸೆಸ್ ಹಣ ಬಳಕೆ ಇಲ್ಲ: ಲಾಡ್

ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಯಶ್‍ಪಾಲ್ ಸುವರ್ಣ, ಒಬಿಸಿ ಮೋರ್ಚಾ ರಾಜ್ಯ ಪ್ರಭಾರಿ ಎಸ್.ಕೆ.ಕವೆರೇಂಧನ್, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ್ ತಪಸ್ವಿ, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅವ್ವಣ್ಣ ಮ್ಯಾಕರಿ, ಬಿ.ಸೋಮಶೇಖರ್ ಉಪಸ್ಥಿತರಿದ್ದರು.

RELATED ARTICLES

Latest News