Sunday, December 14, 2025
Homeರಾಜ್ಯಪಿ.ಎಂ ಕುಸುಮ್‌-ಬಿ ಯೋಜನೆಯಡಿ ಕೃಷಿ ಪಂಪ್‌ಸೆಟ್‌ಗಳಿಗೆ ಸೋಲಾರ್‌ ಪಂಪ್‌ಸೆಟ್‌ ಅಳವಡಿಸಲು ಯೋಜನೆ

ಪಿ.ಎಂ ಕುಸುಮ್‌-ಬಿ ಯೋಜನೆಯಡಿ ಕೃಷಿ ಪಂಪ್‌ಸೆಟ್‌ಗಳಿಗೆ ಸೋಲಾರ್‌ ಪಂಪ್‌ಸೆಟ್‌ ಅಳವಡಿಸಲು ಯೋಜನೆ

Scheme to install solar pump sets for agricultural pump sets under PM Kusum-B scheme

ಬೆಳಗಾವಿ,ಡಿ.13- ಪಿ.ಎಂ ಕುಸುಮ್‌-ಬಿ ಯೋಜನೆಯಡಿ ರಾಜ್ಯದಲ್ಲಿ ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್‌ ಅವಲಂಬನೆ ಕಡಿಮೆ ಮಾಡಲು ಸೋಲಾರ್‌ ಪಂಪ್‌ಸೆಟ್‌ಗಳನ್ನು ಅಳವಡಿಸಲು ಯೋಜನೆ ಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ವಿಧಾನಸಭೆಗೆ ತಿಳಿಸಿದ್ದಾರೆ.

ಶಾಸಕ ಕೆ.ವೈ.ನಂಜೇಗೌಡ ಅವರು ನಿಯಮ 73ರಡಿ ನೀಡಿದ್ದ ಸೂಚನೆಗೆ ಉತ್ತರ ನೀಡಿರುವ ಸಚಿವರು, ಕೇಂದ್ರ ಸರ್ಕಾರದ ಎಂಎನ್‌ಆರ್‌ಇ ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಕೆಆರ್‌ಇಡಿಎಲ್‌ ವತಿಯಿಂದ ರೈತರ ಜಮೀನಿನಲ್ಲಿ ಕೊಳವೆ/ತೆರೆದ ಬಾವಿಗಳಿಗೆ 40 ಸಾವಿರ ಸೋಲಾರ್‌ ಪಂಪ್‌ಸೆಟ್‌ಗಳನ್ನು ಅಳವಡಿಸಲು ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದಿದ್ದಾರೆ.

ಈ ಯೋಜನೆ ಅನ್ವಯ ಸೌರ ಪಂಪ್‌ಸೆಟ್‌ ಅಳವಡಿಕೆಯ ಒಟ್ಟು ವೆಚ್ಚದ ಶೇ.30ರಷ್ಟು ಮೊತ್ತವನ್ನು ಎಂಎನ್‌ಆರ್‌ಇ ಶೇ.50ರಷ್ಟು ಮೊತ್ತವನ್ನು ರಾಜ್ಯ ಸರ್ಕಾರ ಸಹಾಯಧನವಾಗಿ ನೀಡುತ್ತದೆ. ಉಳಿದ ಶೇ.20ರಷ್ಟು ಮೊತ್ತವನ್ನು ಮಾತ್ರ ಫಲಾನುಭವಿಗಳಿಂದ ಪಡೆದು ರೈತರ ಜಮೀನುಗಳಲ್ಲಿ ಸೋಲಾರ್‌ ಪಂಪ್‌ಸೆಟ್‌ ಅಳವಡಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

7.5 ಹೆಚ್‌ಪಿಗಿಂತ ಹೆಚ್ಚಿನ ಸಾಮರ್ಥ್ಯದ ಪಂಪ್‌ಸೆಟ್‌ಗಳನ್ನು ಅಳವಡಿಸಿಕೊಂಡಲ್ಲಿ ಸಹಾಯಧನವು 7.5 ಹೆಚ್‌ಪಿವರೆಗೆ ಮಾತ್ರ ಸಿಗುತ್ತದೆ ಎಂದು ತಿಳಿಸಿದ್ದಾರೆ.

RELATED ARTICLES

Latest News