ನಿತ್ಯ ನೀತಿ : ಜೀವನದಲ್ಲಿ ಎಲ್ಲವನ್ನೂ ಗಳಿಸಬಹುದು, ಆದರೆ ಕಳೆದುಕೊಂಡ ಒಳ್ಳೆಯ ಸಂಬಂಧಗಳನ್ನು ಮತ್ತೆ ಗಳಿಸುವುದು ಅಸಾಧ್ಯ ಪ್ರೀತಿಯ ಬಂಧಗಳನ್ನು ಸದಾ ಜೋಪಾನವಾಗಿ ಕಾಪಾಡಿಕೊಳ್ಳಿ.
ಪಂಚಾಂಗ : ಗುರುವಾರ, 30-07-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ವರ್ಷಾ / ಮಾಸ: ಆಷಾಢ / ಪಕ್ಷ: ಕೃಷ್ಣ / ತಿಥಿ: ಪ್ರತಿಪದಾ / ನಕ್ಷತ್ರ: ಶ್ರವಣ / ಯೋಗ: ಆಯುಷಾನ / ಕರಣ: ಬಾಲವ
ಸೂರ್ಯೋದಯ – ಬೆ.6.05
ಸೂರ್ಯಾಸ್ತ – 06.48
ರಾಹುಕಾಲ – 1.30- 3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00- 10.30
ರಾಶಿಭವಿಷ್ಯ :
ಮೇಷ: ಧಾರ್ಮಿಕ ಕಾರ್ಯಗಳಿಗೆ ಹಣ ವ್ಯಯ ಮಾಡುವಿರಿ. ಮಕ್ಕಳಿಂದ ಸಂತೋಷ ಸಿಗಲಿದೆ.
ವೃಷಭ: ನಿರೀಕ್ಷಿತ ಧನಾಗಮನವಾಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ಮಿಥುನ: ಸೌಜನ್ಯತೆಯಿಂದ ನಡೆದುಕೊಳ್ಳುವುದ ರಿಂದ ನೆರೆಹೊರೆಯವರು ನಿಮಗೆ ಸ್ಪಂದಿಸುವರು.
ಕಟಕ: ವ್ಯವಹಾರಕ್ಕೆ ಸಂಬಂ ಸಿದಂತೆ ಕಾನೂನು ವಿಷಯದಲ್ಲಿ ಹೆಚ್ಚಿನ ಸಲಹೆ ಪಡೆಯುವುದು ಅನಿವಾರ್ಯವಾಗಲಿದೆ.
ಸಿಂಹ: ಲೇವಾದೇವಿ ವ್ಯವಹಾರ ನಡೆಸುವುದು ಸರಿಯಲ್ಲ. ಸೋಮಾರಿತನ ಶತ್ರುವಾಗಿ ಪರಿಣಮಿಸಲಿದೆ.
ಕನ್ಯಾ: ಕೆಲಸ-ಕಾರ್ಯಗಳಲ್ಲಿ ಜನಪ್ರಿಯತೆ ಗಳಿಸುವಿರಿ. ನಿರೀಕ್ಷಿತ ಸ್ಥಾನಮಾನ ಸಿಗಲಿದೆ.
ತುಲಾ: ಅನಗತ್ಯ ಚರ್ಚೆಗಳಿಗೆ ಆಸ್ಪದ ನೀಡದಿರಿ. ಸಾಲ ಮಾಡುವ ಸ್ಥಿತಿ ತಂದುಕೊಳ್ಳಬೇಡಿ.
ವೃಶ್ಚಿಕ: ಶುಭ ಸಮಾರಂಭಗಳು ನಡೆಯುವುದರಿಂದ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.
ಧನುಸ್ಸು: ವಿದ್ಯೆಯ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.
ಮಕರ: ಪತ್ನಿಯ ಸಹಕಾರದಿಂದ ನಿಮ್ಮ ಕೆಲಸ-ಕಾರ್ಯಗಳು ಸುಸೂತ್ರವಾಗಿ ನೆರವೇರಲಿವೆ.
ಕುಂಭ: ಭೂಮಿ, ಆಸ್ತಿ ವಿಚಾರಗಳಲ್ಲಿ ಪ್ರಗತಿ ಕಾಣುವಿರಿ. ಮಕ್ಕಳಿಂದ ಶುಭವಾರ್ತೆ ಕೇಳುವಿರಿ.
ಮೀನ: ಕಹಿ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಿ. ಹಿರಿಯರ ಮಾತುಗಳನ್ನು ಗೌರವಿಸಿ.
