ನಿತ್ಯ ನೀತಿ : ಹೇಗೆ ಒಬ್ಬ ಕುಡುಕನಿಗೆ ಸರಿ, ಕೆಟ್ಟದ್ದು ಗೊತ್ತಾಗುವುದಿಲ್ಲವೋ ಅದೇ ರೀತಿ ಒಬ್ಬ ಸ್ವಾರ್ಥ ಆಸೆಗಳ ಸಾಧಕನಿಗೆ ಸರಿ-ಕೆಟ್ಟದ್ದು ಸ್ವಲ್ಪವೂ ಗೊತ್ತಾಗುವುದಿಲ್ಲ.
ಪಂಚಾಂಗ ಸೋಮವಾರ 26-02-2024
ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಉತ್ತರಾಭಾದ್ರ / ಯೋಗ: ಧೃತಿ / ಕರಣ: ತೈತಿಲ
ಸೂರ್ಯೋದಯ : ಬೆ.06.38
ಸೂರ್ಯಾಸ್ತ : 06.28
ರಾಹುಕಾಲ : 7.30-9.00
ಯಮಗಂಡ ಕಾಲ : 10.30-12.00
ಗುಳಿಕ ಕಾಲ : 1.30-3.00
ರಾಶಿ ಭವಿಷ್ಯ
ಮೇಷ: ಕೆಲಸ-ಕಾರ್ಯಗಳಲ್ಲಿ ತಾಳ್ಮೆ ಅಗತ್ಯ. ವಿವಾದಗಳಿಂದ ದೂರವಿರುವುದು ಒಳಿತು.
ವೃಷಭ: ಬಹಳ ದಿನಗಳ ಕನಸನ್ನು ನನಸು ಮಾಡುವ ಅವಕಾಶಗಳು ಲಭಿಸಲಿವೆ.
ಮಿಥುನ: ಪ್ರತಿಯೊಂದು ಕೆಲಸವನ್ನು ಎಚ್ಚರಿಕೆ ಮತ್ತು ಪ್ರಾಮಾಣಿಕವಾಗಿ ಮಾಡುವುದು ಸೂಕ್ತ.
ಕಟಕ: ಸಂತೋಷವನ್ನು ಇತರರೊಂದಿಗೆ ಹಂಚಿ ಕೊಳ್ಳಲು ಉತ್ತಮ ಅವಕಾಶಗಳು ಸಿಗುವುದಿಲ್ಲ.
ಸಿಂಹ: ದೈನಂದಿನ ಚಟುವಟಿಕೆ ಹೊರತುಪಡಿಸಿ ವಿಭಿನ್ನ ಕಾರ್ಯಗಳಲ್ಲಿ ಆಸಕ್ತಿ ಹೊಂದುವಿರಿ.
ಕನ್ಯಾ: ಮಿತ್ರರಲ್ಲಿರುವ ಭಿನ್ನಾಭಿಪ್ರಾಯ ಹೋಗಲಾಡಿಸಲು ಯತ್ನಿಸುವಿರಿ.
ತುಲಾ: ಮಕ್ಕಳಿಗೆ ಹಿಂದೆ ಕೊಟ್ಟಿದ್ದ ಮಾತನ್ನು ಉಳಿಸಿಕೊಳ್ಳಲು ನೀವು ಶಕ್ತಿರಾಗಿರುವಿರಿ.
ವೃಶ್ಚಿಕ: ಹಲವು ದಿನಗಳಿಂದ ಬರಬೇಕಾಗಿರುವ ಹಣ ಸಂಜೆ ವೇಳೆಗೆ ಕೈ ಸೇರುವುದು.
ಧನುಸ್ಸು: ವಿದ್ಯಾರ್ಥಿಗಳು ಓದಿನ ಬಗ್ಗೆ ಹೆಚ್ಚು ಗಮನ ಹರಿಸಿ. ಅನಗತ್ಯ ಚರ್ಚೆ ಬೇಡ.
ಮಕರ: ಮಗಳ ಮದುವೆಯ ಕಾರ್ಯಕಲಾಪಗಳು ಸುಗವಾಗಿ ಸಾಗುವುದರಿಂದ ನೆಮ್ಮದಿ ಇರಲಿದೆ.
ಕುಂಭ: ತುರ್ತು ವಿಷಯಗಳ ಬಗ್ಗೆ ಹೆಚ್ಚಾಗಿ ಗಮನ ಹರಿಸಿ. ಕೌಟುಂಬಿಕ ಸಂಬಂಧಗಳು ಗಟ್ಟಿಗೊಳ್ಳಲಿವೆ.
ಮೀನ: ನೀವು ಯೋಚಿಸಿದಂತೆಯೇ ಸನ್ನಿವೇಶಗಳು ಎದುರಾಗಿ ಅಚ್ಚರಿ ಮೂಡಿಸಲಿವೆ.