ಪ್ರಯಾಗರಾಜ್,ಫೆ.26-ಜ್ಞಾನವಾಪಿ ಮಸೀದಿಯ ವ್ಯಾಸ್ ತೆಹ್ಖಾನಾದಲ್ಲಿ ಪೂಜೆಗೆ ಅವಕಾಶ ನೀಡಿದ ವಾರಾಣಾಸಿ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಅಲಹಾಬಾದ್ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ನ್ಯಾಯಾಲಯದ ಈ ತೀರ್ಪಿನಿಂದಾಗಿ ಹಿಂದೂಗಳ ಹೋರಾಟಕ್ಕೆ ಕಾನೂನಿನ ಜಯ ಸಿಕ್ಕಂತಾಗಿದೆ.
ವಾರಾಣಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರನ್ನು ಆಸ್ತಿಯ ರಿಸೀವರ್ (ಕಾಪಾಲುದಾರ) (ವ್ಯಾಸ್ ತೆಹ್ಖಾನಾ) ಆಗಿ ನೇಮಿಸಿದ ವಾರಾಣಸಿ ಜಿಲ್ಲಾ ನ್ಯಾಯಾೀಧಿಶರ ಜನವರಿ 17 ರ ಆದೇಶ ಮತ್ತು ಜನವರಿ 31 ರ ಪೂಜೆಗೆ ಅನುಮತಿ ನೀಡಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಜ್ಞಾನವಾಪಿ ಮಸೀದಿ ಆಡಳಿತ ಸಮಿತಿಯ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಸಂಬಂಧ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಪ್ರತಿಕ್ರಿಯಿಸಿ, ಅಲಹಾಬಾದ್ ಹೈಕೋರ್ಟ್ ಅಂಜುಮನ್ ಇಂಟೆಜಾಮಿಯಾ ಅವರ ಆದೇಶದ ಮೊದಲ ಮೇಲ್ಮನವಿಯನ್ನು ವಜಾಗೊಳಿಸಿದೆ. ಇದರಲ್ಲಿ ವಾರಾಣಸಿ ಜಿಲ್ಲಾ ನ್ಯಾಯಾಲಯವು ಜನವರಿ 17 ಮತ್ತು 31ರಂದು ನೀಡಿದ್ದ ಆದೇಶವನ್ನು ಅಲಹಾಬಾದ್ ಹೈಕೋರ್ಟ್‍ನಲ್ಲಿ ಪ್ರಶ್ನಿಸಲಾಗಿದೆ. ವಿಷಯ ಏನೆಂದರೆ ಜ್ಞಾನವಾಪಿ ಕಾಂಪ್ಲೆಕ್ಸ್‍ನ ವ್ಯಾಸ್ ತೆಹ್ಖಾನಾದಲ್ಲಿ ನಡೆಯುತ್ತಿರುವ ಪೂಜೆ ಮುಂದುವರಿಯುತ್ತದೆ ಎಂದರು.
ಬಲವಂತವಾಗಿ ಭೂ ಕಬಳಿಕೆ:ಟಿಎಂಸಿ ನಾಯಕ ಶಾಜಹಾನ್ ಬಂಧನ
ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ವಿಗ್ರಹಪೂಜೆಗೆ ಅರ್ಚಕರಿಗೆ ಅವಕಾಶ ಕಲ್ಪಿಸಿ ವಾರಾಣಸಿ ಜಿಲ್ಲಾ ನ್ಯಾಯಾಲಯ ಜ. 31ರಂದು ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‍ಲ್ಲೂ ಮಸೀದಿ ಸಮಿತಿ ಅರ್ಜಿ ಸಲ್ಲಿಸಿತ್ತು. ಜಿಲ್ಲಾ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾೀಧಿಶರೊಬ್ಬರು ನಿವೃತ್ತಿಯ ದಿನದಂದೇ ತರಾತುರಿಯಲ್ಲಿ ಆದೇಶ ಹೊರಡಿಸಿದ್ದಾರೆ ಎಂದು ಮಸೀದಿ ಸಮಿತಿ ಪರ ವಕೀಲರು ಪೀಠಕ್ಕೆ ತಿಳಿಸಿದ್ದರು.
ಆ ಸ್ಥಳದಲ್ಲಿ ಹಿಂದಿನಿಂದಲೂ ಪೂಜೆ ನಡೆಸಲಾಗುತ್ತಿತ್ತು. 1993 ರಲ್ಲಿ ಪೂಜೆ ನಿಲ್ಲಿಸಲಾಗಿತ್ತು. ಈಗ ಪೂಜೆಗೆ ಅವಕಾಶ ನೀಡಿರುವುದರಿಂದ ಅವರಿಗೆ (ಮುಸ್ಲಿಮರಿಗೆ) ಯಾವುದೇ ತೊಂದರೆ ಉಂಟಾಗಿಲ್ಲ ಎಂದು ಹಿಂದೂ ಅರ್ಜಿದಾರರ ಪರ ವಕೀಲರು ನ್ಯಾಯಾಲಯಕ್ಕೆ ಹೇಳಿದ್ದರು. ಈ ಹಿಂದೆಯೂ ಮಸೀದಿಯ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅವಕಾಶ ನೀಡಿರುವ ವಾರಾಣಸಿ ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಸೀದಿ ನಿರ್ವಹಣಾ ಸಮಿತಿ ಅಂಜುಮನ್ ಇಂತೇಝಾಮಿಯಾ ಮಸಾಜಿದ್ ಅಲಹಾಬಾದ್ ಹೈಕೋರ್ಟ್‍ನ ಮೆಟ್ಟಿಲೇರಿತ್ತು.
ವಾರಣಾಸಿ ಜಿಲ್ಲಾ ನ್ಯಾಯಾಲಯ ಜ.31ರಂದು ಆದೇಶ ನೀಡಿತ್ತು. ಇದರ ವಿರುದ್ಧ ಮಸೀದಿ ಸಮಿತಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಮನವಿಯನ್ನು ತುರ್ತಾಗಿ ಆಲಿಸಲು ಸುಪ್ರೀಂಕೋರ್ಟ್ ನಿರಾಕರಿಸಿದ್ದರಿಂದ ಸಮಿತಿ ಹೈಕೋರ್ಟ್ ಮೊರೆ ಹೋಗಿತ್ತು. ಈ ನಡುವೆ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಜ್ಞಾನವಾಪಿ ಮಸೀದಿಯ ನೆಲ ಮಾಳಿಗೆಯಲ್ಲಿ ಪೂಜೆ ಪ್ರಾರಂಭಗೊಂಡಿದೆ. ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗೆ ಮುಚ್ಚಿದ ನೆಲಮಾಳಿಗೆ ತೆಹ್ಖಾನಾ ಒಳಗಡೆ ಹಿಂದೂಗಳು ಪೂಜಾ ವಿಧಿಗಳನ್ನು ನಡೆಸಲು 7 ದಿನಗಳಲ್ಲಿ ಸೂಕ್ತ ವ್ಯವಸ್ಥೆ ಮಾಡುವಂತೆ ವಾರಾಣಸಿ ಜಿಲ್ಲಾ ನ್ಯಾಯಾೀಧಿಶರು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದರು.