Homeರಾಜ್ಯಕುಂದಾಪುರದಲ್ಲಿ ಗುಂಡಿಕ್ಕಿ ರಿಯಲ್‌ ಎಸ್ಟೇಟ್‌ ಉದ್ಯಮಿಯ ಹತ್ಯೆ

ಕುಂದಾಪುರದಲ್ಲಿ ಗುಂಡಿಕ್ಕಿ ರಿಯಲ್‌ ಎಸ್ಟೇಟ್‌ ಉದ್ಯಮಿಯ ಹತ್ಯೆ

ಬೆಂಗಳೂರು,ಜೂ.31- ಬೆಳ್ಳಂಬೆಳಿಗ್ಗೆ ರಿಯಲ್‌ ಎಸ್ಟೇಟ್‌ ಉದ್ಯಮಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಪಟ್ಟಣದಲ್ಲಿ ನಡೆದಿದೆ. ಬಾರ್ಕೂರು-ಕಚ್ಚೂರು ಮೂಲದ ಐವನ್‌ ರಿಚರ್ಡ್‌ ಮಸ್ಕರೇನಸ್‌‍ (45) ಗುಂಡಿಗೆ ಬಲಿಯಾದ ರಿಯಲ್‌ ಎಸ್ಟೇಟ್‌ ಉದ್ಯಮಿ. ಜೊತೆಗೆ ಸಣ್ಣಪುಟ್ಟ ವ್ಯಾಪಾರ, ವ್ಯವಹಾರವನ್ನೂ ನಡೆಸುತ್ತಿದ್ದರು.

ಐವನ್‌ ರಿಚರ್ಡ್‌ ಅವರು ಇಂದು ಮುಂಜಾನೆ 3.30ರ ಸಮಯದಲ್ಲಿ ಮಹಿಳೆಯೊಂದಿಗೆ ಕಾರಿನಲ್ಲಿ ಕುಂದಾಪುರದ ಚರ್ಚ್‌ಗೆ ಹೋಗುತ್ತಿದ್ದಾಗ ಹೋಲಿ ರೋಸರಿ ಚರ್ಚ್‌ ಬಳಿ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಗನ್‌ನಿಂದ ಗುಂಡು ಹಾರಿಸಿದ್ದಾನೆ.ಗುಂಡೇಟಿನಿಂದ ಗಾಯಗೊಂಡಿದ್ದ ಐವನ್‌ ರಿಚರ್ಡ್‌ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೊಲೆ ಮಾಡಿದ ಆರೋಪಿ ತಾನು ಬಂದಿದ್ದ ಕಾರಿನಲ್ಲಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ.ಸುದ್ದಿ ತಿಳಿದ ಕುಂದಾಪುರ ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಶವವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಐವನ್‌ ರಿಚರ್ಡ್‌ ಅವರನ್ನು ಆತನ ಸ್ನೇಹಿತನೇ ಗುಂಡಿಕ್ಕಿ ಕೊಲೆ ಮಾಡಿದ್ದಾನೆ ಎಂದು ಶಂಕೆ ವ್ಯಕ್ತಪಡಿಸಿರುವ ಪೊಲೀಸರು ಆತನಿಗಾಗಿ ಶೋಧ ನಡೆಸುತ್ತಿದ್ದಾರೆ.ಮುಂಜಾನೆ ನಡೆದ ಈ ಬರ್ಭರ ಹತ್ಯೆಯಿಂದಾಗಿ ಕುಂದಾಪುರ ಪಟ್ಟಣದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ. ಎಲ್ಲಾ ಕಡೆ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ.

RELATED ARTICLES

Latest News