Homeರಾಜ್ಯಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ಮೋದಿ

PM Modi in Mysore today, heavy security arrangements

ಮೈಸೂರು, ಆ.1: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮೈಸೂರಿನ ದೇವರಾಜ ಮೊಹಲ್ಲಾದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ, ಸುಮಾರು ₹45 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ “ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ (ವಿವೇಕ ಸ್ಮಾರಕ)”ವನ್ನು ಉದ್ಘಾಟಿಸಿದರು.

ವಿಶೇಷ ಹೆಲಿಕಾಪ್ಟರ್ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಓವಲ್ ಮೈದಾನಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಯತೀಂದ್ರ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ರಸ್ತೆಯುದ್ದಕ್ಕೂ ನೆರೆದಿದ್ದ ಜನರು ಪ್ರಧಾನಿ ಪರ ಘೋಷಣೆಗಳನ್ನು ಕೂಗಿ ಬರಮಾಡಿಕೊಂಡರು.

ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಪೂಜೆ ನೆರವೇರಿಸಿದರು. ಬಳಿಕ ಆಶ್ರಮದಲ್ಲಿ ಕೆಲಕಾಲ ಧ್ಯಾನ ಮಾಡಿ, ಆಶ್ರಮದ ಆವರಣದಲ್ಲಿ ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು.

ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ಸ್ವಾಮಿ ವಿವೇಕಾನಂದರು ನೆಲೆಸಿದ್ದ ನೆನಪಿಗಾಗಿ ಹಾಗೂ ಯುವಜನರಲ್ಲಿ ಸಾಂಸ್ಕೃತಿಕ, ಆಧ್ಯಾತ್ಮಿಕ ಮತ್ತು ರಾಷ್ಟ್ರಭಕ್ತಿಯ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರವನ್ನು ನಿರ್ಮಿಸಲಾಗಿದೆ.

ಪ್ರಧಾನಿ ಮೋದಿ ಅವರ ಈ ಭೇಟಿ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆಯಲ್ಲೂ ತಾತ್ಕಾಲಿಕ ಬದಲಾವಣೆ ಮಾಡಲಾಗಿತ್ತು.

ವಿಶೇಷ ಕಾಣಿಕೆ :
ಅಯೋಧ್ಯೆಯ ಬಾಲರಾಮನ ಮೂರ್ತಿಯನ್ನು ಕೆತ್ತಿ ದೇಶದ ಗಮನ ಸೆಳೆದಿರುವ ಮೈಸೂರಿನ ಖ್ಯಾತ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ಕೆತ್ತಿರುವ ಸ್ವಾಮಿ ವಿವೇಕಾನಂದರ ಏಕಶಿಲಾ ಬಿಳಿ ಮಾರ್ಬಲ್‌ ಮೂರ್ತಿಯನ್ನು ಪ್ರಧಾನಿಯವರಿಗೆ ವಿಶೇಷ ಕಾಣಿಕೆಯಾಗಿ ನೀಡಲಾಯಿತು.

ಈ ಸುಂದರ ಶಿಲ್ಪವನ್ನು ರಾಮಕೃಷ್ಣ ಆಶ್ರಮದ ವತಿಯಿಂದ ಪ್ರಧಾನಿಯವರಿಗೆ ವಿಶೇಷ ನೆನಪಿನ ಕಾಣಿಕೆಯಾಗಿ ನೀಡಲಾಗುತ್ತಿದ್ದು, ಮೈಸೂರಿನ ಶಿಲ್ಪಕಲೆಯ ವೈಭವವು ಮತ್ತೊಮೆ ದೇಶದ ಮುಂದೆ ಅನಾವರಣಗೊಳ್ಳಲಿದೆ.

RELATED ARTICLES

Latest News