ಹಾಸನ, ಆ.2- ನಿರಂತರ ಮಳೆಯ ಅಬ್ಬರಕ್ಕೆ ಸಕಲೇಶಪುರದ ಎಡಕುಮಾರಿ-ಶಿರವಾಗಿಲು ಬಳಿ ರೈಲ್ವೆ ಹಳಿ ಮೇಲೆ ಗುಡ್ಡಕುಸಿತವಾಗಿದ್ದು, ರೈಲುಗಳ ಸಂಚಾರ ಬಂದ್ ಮಾಡಲಾಗಿದೆ.
ಕಳೆದ ರಾತ್ರಿ 8.45ರ ಸುಮಾರಿನಲ್ಲಿ ಗುಡ್ಡ ಕುಸಿತವಾಗಿದ್ದು, ರೈಲುಗಳ ಸಂಚಾರ ಅಸ್ತವ್ಯಸ್ತವಾಗಿತ್ತು. ನಿರಂತರ ಮಳೆಯಿಂದಾಗಿ ಮಣ್ಣು ತೆರವು ಕಾರ್ಯಾಚರಣೆಗೆ ತೀವ್ರ ತೊಂದರೆ ಉಂಟಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಸಂಚರಿಸಬೇಕಿದ್ದ 16540 ಮಂಗಳೂರು ಜಂಕ್ಷನ್‌ಯಶವಂತಪುರ ಎಕ್‌್ಸಪ್ರೆಸ್ ಹಾಗೂ 16575 ಯಶವಂತಪುರ-ಮಂಗಳೂರು ಜಂಕ್ಷನ್ ಎಕ್‌್ಸಪ್ರೆಸ್ ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ.
ಪ್ರಯಾಣಿಕರಿಗೆ ಆಗುವ ತೊಂದರೆ ತಪ್ಪಿಸುವ ಉದ್ದೇಶದಿಂದ ಹಳಿ ದುರಸ್ತಿ ಕಾರ್ಯವನ್ನು ತ್ವರಿತಗತಿಯಲ್ಲಿ ನಡೆಸಲಾಗುತ್ತಿದ್ದು, ಸಾಧ್ಯವಾದಷ್ಟು ಶೀಘ್ರದಲ್ಲೇ ರೈಲು ಸಂಚಾರ ಪುನರಾರಂಭಿಸಲು ಎಲ್ಲ ಪ್ರಯತ್ನ ಕೈಗೊಳ್ಳಲಾಗಿದೆ ಎಂದು ದಕ್ಷಿಣ ಪಶ್ಚಿಮ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಮಂಜುನಾಥ ಕನಮಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
