ಕೋಲ್ಕತ್ತಾ,ಫೆ.29- ಸಂದೇಶ್ಖಾಲಿ ಪ್ರಕರಣದ ಪ್ರಮುಖ ಆರೋಪಿ, ತೃಣಮೂಲ ಕಾಂಗ್ರೆಸ್ ಮುಖಂಡ ಶೇಖ್ ಷಹಜಹಾನ್‍ನನ್ನು ಬಂಧಿಸಲಾಗಿದೆ. 55 ದಿನಗಳಿಂದ ತಲೆಮರೆಸಿಕೊಂಡಿದ್ದ ಶಾಜಹಾನ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸ್ ವಿಶೇಷ ಪಡೆಯು ಉತ್ತರ 24 ಪರಗಣ ಜಿಲ್ಲೆಯಲ್ಲಿ ತಡರಾತ್ರಿ ಬಂಸಿದೆ.
ಬಳಿಕ ಬಸಿರ್ಹತ್ ನ್ಯಾಯಾಲಯಕ್ಕೆ ಕರೆದೊಯ್ದಿದೆ. ವಿಶೇಷ ತಂಡವು ಶೇಖ್ ಅವರ ಚಲನವಲನಗಳ ಮೇಲೆ ಹಲವು ದಿನಗಳಿಂದ ಕಣ್ಣಿಟ್ಟಿತ್ತು ಎಂದು ಅಕಾರಿಗಳು ತಿಳಿಸಿದ್ದಾರೆ.ಷಹಜಹಾನ್ ಮತ್ತು ಆತನ ಸಹಚರರು ಸಂದೇಶ್ಖಾಲಿಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಭೂಕಬಳಿಕೆ ಆರೋಪ ಹೊತ್ತಿದ್ದಾರೆ. ಹೀಗಾಗಿ, ಉತ್ತರ 24 ಪರಗಣ ಜಿಲ್ಲೆಯಲ್ಲಿ ಶೇಖ್ ಷಹಜಹಾನ್‍ನನ್ನು ಬಂಗಾಳದ ವಿಶೇಷ ಪೊಲೀಸ್ ತಂಡವು ಮಧ್ಯರಾತ್ರಿ ಬಂಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈತ 55 ದಿನಗಳಿಂದ ತಲೆಮರೆಸಿಕೊಂಡಿದ್ದ. ಬಂಧನದ ನಂತರ ಆತನನ್ನು ಬಸಿರ್ಹತ್ ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು. ಬಂಧನಕ್ಕೆ ಮುನ್ನ ಹಲವು ದಿನಗಳಿಂದ ಆತನ ಚಟುವಟಿಕೆಗಳ ಮೇಲೆ ತಂಡ ನಿಗಾ ಇರಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂದೇಶ್ಖಾಲಿ ಪ್ರಕರಣದಲ್ಲಿ ಟಿಎಂಸಿ ನಾಯಕನ ಹೆಸರನ್ನೂ ಸೇರಿಸುವಂತೆ ಕೋಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಆದೇಶಿಸಿದ ಮೂರು ದಿನಗಳ ನಂತರ ಆತನನ್ನು ಪೊಲೀಸರು ಬಂಸಿದ್ದಾರೆ. ಪ್ರಕರಣದಲ್ಲಿ ಆತನಿಗೆ ನೋಟೀಸ್ ನೀಡಬೇಕು. ಬಂಧನ ವಿಚಾರವಾಗಿ ಯಾವುದೇ ಕಾರಣ ನೀಡುವಂತಿಲ್ಲ ಎಂದು ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿತ್ತು.
ಟಿಎಂಸಿ ನಾಯಕ ಹಾಗೂ ಆತನ ಬೆಂಬಲಿಗರು, ಬಲವಂತವಾಗಿ ತಮ್ಮ ಭೂಕಬಳಿಕೆ ಮಾಡಿದ್ದಾರೆ ಮತ್ತು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಹಲವು ಮಹಿಳೆಯರು ಆರೋಪಿಸಿದ್ದರು. ಅದಾದ ಬಳಿಕ, ಉತ್ತರ 24 ಪರಗಣ ಜಿಲ್ಲೆಯ ಸಂದೇಶ್ಖಾಲಿಯಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆದಿವೆ.
2019ರಲ್ಲಿ ನಡೆದ ಬಿಜೆಪಿಯ ಮೂವರು ಕಾರ್ಯಕರ್ತರ ಕೊಲೆ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿರುವ ಶೇಖ್, ಜನವರಿ 5ರಿಂದ ನಾಪತ್ತೆಯಾಗಿದ್ದರು. ಶೇಖ್, ಪಡಿತರ ಅಕ್ರಮ ಹಾಗೂ ಭೂ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ನಡೆಸಿದ್ದಾನೆ ಎಂದು ಜಾರಿ ನಿರ್ದೇಶನಾಲಯವೂ ಪ್ರಕರಣ ದಾಖಲಿಸಿಕೊಂಡಿದೆ.
ಟಿಎಂಸಿ ನಾಯಕ ಶಾಜಹಾನ್ ಶೇಖ್ ಅವರನ್ನು ಬಂಧಿಸುವಂತೆ ಕೋಲ್ಕತಾ ಹೈಕೋರ್ಟ್ ಪೊಲೀಸರಿಗೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ, ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ ವಿ ಆನಂದ ಬೋಸ್ ಅವರು ಸಂದೇಶಖಾಲಿಯಲ್ಲಿ ಶಹಜಹಾನ್ ನಡೆಸಿದ ದೌರ್ಜನ್ಯದ ಬಗ್ಗೆ ವಿವರವಾಗಿ 72 ಗಂಟೆಗಳ ಒಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶಹಜಹಾನ್ ಶೇಖ್, ಟಿಎಂಸಿಯ ಪ್ರಬಲ ನಾಯಕರಾಗಿದ್ದಾರೆ, ಸಂದೇಶ್‍ಖಾಲಿ ಘಟಕದ ಟಿಎಂಸಿ ಅಧ್ಯಕ್ಷರೂ ಆಗಿದ್ದಾರೆ. ಜನವರಿ 5 ರಂದು ಬಂಗಾಳದ ಪಡಿತರ ವಿತರಣೆ ಹಗರಣ ಪ್ರಕರಣದಲ್ಲಿ ಷಹಜಹಾನ್ ಅವರ ವಿಚಾರಣೆಗೆ ಇಡಿ ಬಂದಾಗ ಶೇಖ್ ತಲೆಮರೆಸಿಕೊಂಡಿದ್ದರು.
ಏನಿದು ಷಹಜಹಾನ್ ಪ್ರಕರಣ? :
ಸಂದೇಶ್ಖಾಲಿಯಲ್ಲಿ ವಾಸಿಸುವ ಮಹಿಳೆಯರು ಆತನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರು, ಆಗ ಆತನ ಹೆಸರು ಬೆಳಕಿಗೆ ಬಂದಿತ್ತು. ಬಿಜೆಪಿ ಪಕ್ಷವೂ ಕೂಡ ಈ ವಿಚಾರವಾಗಿ ಮಮತಾ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಪಶ್ಚಿಮ ಬಂಗಾಳದ ಪಡಿತರ ವಿತರಣೆ ಹಗರಣದಲ್ಲಿ ಸುಮಾರು 10 ಸಾವಿರ ಕೋಟಿ ರೂಪಾಯಿಗಳ ಭ್ರಷ್ಟಾಚಾರ ನಡೆದಿದೆ ಎಂದು ಇಡಿ ಹೇಳಿದೆ. ಇಡಿ ಮೊದಲು ಮಾಜಿ ಸಚಿವೆ ಜ್ಯೋತಿಪ್ರಿಯಾ ಮಲ್ಲಿಕ್ ಅವರನ್ನು ಬಂಸಿತ್ತು, ಇದರಲ್ಲಿ ಶೇಖ್ ಹಾಗೂ ಪುರಸಭೆ ಮಾಜಿ ಅಧ್ಯಕ್ಷ ಶಂಕರ್ ಆದ್ಯಾ ಭಾಗಿಯಾಗಿರುವುದು ತಿಳಿದುಬಂದಿದೆ.