ಬೆಂಗಳೂರು,ಆ.4-ರಾಷ್ಟ್ರೀಯ ಹೆದ್ದಾರಿ 4ರ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ಡಾಂಬರೀಕರಣ ಕಾಮಗಾರಿ ಕೈಗೊಂಡಿರುವುದರಿಂದ ಸಾರ್ವಜನಿಕರ ಸುಗಮ ಸಂಚಾರದ ದೃಷ್ಠಿಯಿಂದ ಇಂದಿನಿಂದ ಆ.12 ರ ವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಈ ಅವಧಿಯ ಶನಿವಾರ ಮತ್ತು ಭಾನುವಾರ ರಾತ್ರಿ 12 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ತುಮಕೂರು ಕಡೆಗೆ ಹೋಗುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಈ ಕಾಮಗಾರಿ ಕೈಗೊಳ್ಳಲಾಗಿದ್ದು, ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ಎಸ್ಆರ್ಎಸ್ ಅಪ್ಪರ್ ರ್ಯಾಂಪ್ದಿಂದ ಕೆನ್ನಮೆಟಲ್ ವಿಡಿಯಾ ಡೌನ್ ರ್ಯಾಂಪ್ ವರೆಗೆ ಫ್ಲೈಓವರ್ ಮೇಲೆ ಸಂಚಾರ ನಿರ್ಬಂಧಿಸಲಾಗಿದೆ.
ಪರ್ಯಾಯ ಮಾರ್ಗ: ಬೆಂಗಳೂರಿನಿಂದ ನೆಲಮಂಗಲ ಕಡೆಗೆ ಸಂಚರಿಸುವ ವಾಹನಗಳು ಎಸ್ಆರ್ಎಸ್ ಅಪ್ಪರ್ ರ್ಯಾಂಪ್ ಫ್ಲೈಓವರ್ ಕೆಳಭಾಗಗದ ಎನ್ಹೆಚ್ 4 ರಸ್ತೆ ಮತ್ತು ಸರ್ವಿಸ್ ರಸ್ತೆ ಮೂಲಕ ಎಸ್ಆರ್ಎಸ್ ಜಂಕ್ಷನ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ ಜಂಕ್ಷನ್, 8ನೇ ಮೈಲಿ ಜಂಕ್ಷನ್ ಮುಖಾಂತರ ಪಾರ್ಲೆ ಜಿ ಟೋಲ್ ಮೂಲಕ ಸಂಚರಿಸಬಹುದಾಗಿದೆ.ಸಾರ್ವಜನಿಕರು ಸಹಕರಿಸುವಂತೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.
