Homeರಾಜ್ಯBIG NEWS : ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿಯವರು ರಾಜೀನಾಮೆ

BIG NEWS : ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿಯವರು ರಾಜೀನಾಮೆ

ಬೆಂಗಳೂರು, ಆ.7 – ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿಯವರು ರಾಜೀನಾಮೆ ನೀಡಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾದ ಪತ್ರ ಸಾಮಾಜಿಕ ಜಾಲಾತಾಣ ದಲ್ಲಿ ಹರಿದಾಡುತ್ತಿದೆ.

ಕಳೆದ ಒಂದು ವಾರದಿಂದ ನಡೆದಿದ್ದ ಈ ಪ್ರಹಸನ ಇಂದು ಅಂತ್ಯಗೊಂಡಂತಾಗಿದ್ದು, ಸಾಂವಿಧಾನಿಕ ಬಿಕ್ಕಟ್ಟು ಎದುರಾಗದಂತೆ ಮತ್ತು ಯಾವುದೇ ಸಮಸ್ಯೆ ಎದುರಾಗದಂತೆ ಹೊರಟ್ಟಿಯವರು ಶಾಂತಚಿತ್ತದಿಂದಲೇ ಸಿಎಂ ಡಿ.ಕೆ.ಶಿವಕುಮಾರ್‌ರವರ ಮಾತಿನಂತೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Basavaraj Horatti resigns Council Chairman

RELATED ARTICLES
spot_img

Latest News