Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-08-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-08-2026)

ನಿತ್ಯ ನೀತಿ : ತಮ್ಮ ಬಲಹೀನತೆಯನ್ನು ಅರಿತವರೇ ನಿಜವಾದ ಶಕ್ತಿವಂತರು. ತಮ್ಮತಪ್ಪುಗಳನ್ನು ಗುರುತಿಸಿಕೊಳ್ಳಲು ಸಾಧ್ಯವಾದವರು ಬುದ್ಧಿವಂತರು. ಆ ಅರಿವಿನೊಂದಿಗೆ ಬೆಳೆಯೋಣ.

ಪಂಚಾಂಗ : ಭಾನುವಾರ, 09-08-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ವರ್ಷಾ / ಮಾಸ: ಆಷಾಢ / ಪಕ್ಷ: ಕೃಷ್ಣ / ತಿಥಿ: ಏಕಾದಶಿ / ನಕ್ಷತ್ರ: ಮೃಗಶಿರಾ / ಯೋಗ: ಹರ್ಷಣ / ಕರಣ: ಕೌಲವ

ಸೂರ್ಯೋದಯ : ಬೆ.6.07
ಸೂರ್ಯಾಸ್ತ : 06.45
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ರಾಶಿ ಭವಿಷ್ಯ
ಮೇಷ
: ಇನ್ನೊಬ್ಬರ ಮಾತುಗಳನ್ನು ಆಲಿಸಿ ತೀರ್ಮಾನಕ್ಕೆ ಬರುವುದು ಅನಿರ್ವಾಯವಾಗಲಿದೆ.
ವೃಷಭ: ಕುಟುಂಬದಲ್ಲಿ ಪರಿಸ್ಥಿತಿಗಳು ಏರಿಳಿತಗಳಿಂದ ಕೂಡಿರುತ್ತವೆ.
ಮಿಥುನ: ವ್ಯಾಪಾರದಲ್ಲಿ ಶತ್ರುಗಳ ಕಾಟ.

ಕಟಕ: ಸಹೋದರತ್ವದಲ್ಲಿ ದ್ವೇಷ ಉಂಟಾಗಲಿದೆ.
ಸಿಂಹ: ಕಾನೂನು ತೊಡಕು ಎದುರಿಸಬೇಕಾದ ಸಂದರ್ಭ ಬರಬಹುದು. ಸಾಲಕ್ಕೆ ಜಾಮೀನಾಗಿ ನಿಲ್ಲದಿರಿ.
ಕನ್ಯಾ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳಾಗಲಿವೆ.

ತುಲಾ: ಹಣದ ವಿಷಯ ದಲ್ಲಿ ದೊಡ್ಡ ಸಮಸ್ಯೆ ಇರುವುದಿಲ್ಲ. ಮನಸ್ಸಿಗೆ ನೆಮ್ಮದಿ ಸಿಗಲಿದೆ.
ವೃಶ್ಚಿಕ: ಹೊಸ ಜನರನ್ನು ಭೇಟಿ ಮಾಡುವುದರಿಂದ ಹೆಚ್ಚು ಪ್ರಯೋಜನ ವಾಗಲಿದೆ.
ಧನುಸ್ಸು: ಬಂದ ಅವಕಾಶ ಕೈ ತಪ್ಪುವುದು. ಉದ್ಯೋಗದಲ್ಲಿ ಒತ್ತಡ ಹೆಚ್ಚಾಗಲಿದೆ.

ಮಕರ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಕುಂಭ: ಹೊಸ ವಾಹನ ಖರೀದಿಸುವ ಆಲೋಚನೆಯನ್ನು ಮುಂದೂಡುವುದು ಒಳಿತು.
ಮೀನ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.

RELATED ARTICLES
spot_img

Latest News