Homeರಾಷ್ಟ್ರೀಯಪ್ರಧಾನಿ ಮೋದಿ- ಅಮೆರಿಕದ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್‌ ಮಾತುಕತೆ

ಪ್ರಧಾನಿ ಮೋದಿ- ಅಮೆರಿಕದ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್‌ ಮಾತುಕತೆ

ನವದೆಹಲಿ, ಆ. 8- ಅಮೆರಿಕದ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ, ವ್ಯಾಪಾರ, ರಕ್ಷಣಾ ಸಹಕಾರ ಹಾಗೂ ಇಂಧನ ಭದ್ರತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತ-ಅಮೆರಿಕ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ವಿಸ್ತರಿಸುವ ಕುರಿತು ಚರ್ಚಿಸಿದರು. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ನಡೆದ ಈ ಮಾತುಕತೆಯಲ್ಲಿ ಉದಯೋನುಖ ತಂತ್ರಜ್ಞಾನಗಳು ಹಾಗೂ ಪ್ರಮುಖ ಖನಿಜಗಳ ಕ್ಷೇತ್ರದಲ್ಲಿ ಸಹಕಾರ ಬಲಪಡಿಸುವ ಬದ್ಧತೆಯನ್ನು ಉಭಯ ನಾಯಕರು ಪುನರುಚ್ಚರಿಸಿದರು.

ಇದೇ ವೇಳೆ ಪ್ರಧಾನಿ ಮೋದಿ ಅವರು ಉಪಾಧ್ಯಕ್ಷ ಜೆ.ಡಿ. ವ್ಯಾನ್‌್ಸಹಾಗೂ ಅವರ ಪತ್ನಿ ಉಷಾ ಅವರಿಗೆ ಮಗು ಜನನಕ್ಕೆ ಅಭಿನಂದನೆ ಸಲ್ಲಿಸಿದರು. ಪ್ರಮುಖ ಕ್ಷೇತ್ರಗಳಲ್ಲಿ ಭಾರತ-ಅಮೆರಿಕ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಆಳಗೊಳಿಸುವ ಮಾರ್ಗಗಳ ಕುರಿತು ಚರ್ಚಿಸಿದ್ದೇವೆ ಎಂದು ಮೋದಿ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ. ಭಾರತೀಯ ಸರ್ಕಾರದ ಪ್ರಕಟಣೆಯ ಪ್ರಕಾರ, ಉಭಯ ನಾಯಕರು ದ್ವಿಪಕ್ಷೀಯ ಪಾಲುದಾರಿಕೆಯ ಪ್ರಗತಿಯನ್ನು ಪರಿಶೀಲಿಸಿದರು. ಉನ್ನತ ಮಟ್ಟದ ಮಾತುಕತೆಗಳಲ್ಲಿ ನಿರಂತರ ವೇಗ ಕಂಡುಬರುತ್ತಿರುವುದನ್ನು ಅವರು ಗಮನಿಸಿದರು. ವ್ಯಾಪಾರ, ರಕ್ಷಣೆ, ಪ್ರಮುಖ ಹಾಗೂ ಉದಯೋನುಖ ತಂತ್ರಜ್ಞಾನಗಳು, ಇಂಧನ ಭದ್ರತೆ ಮತ್ತು ಪ್ರಮುಖ ಖನಿಜಗಳ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ಪುನರುಚ್ಚರಿಸಿದರು.
ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಹಾಗೂ ಜಾಗತಿಕ ಬೆಳವಣಿಗೆಗಳ ಬಗ್ಗೆಯೂ ಇಬ್ಬರೂ ನಾಯಕರು ಅಭಿಪ್ರಾಯ ವಿನಿಮಯ ಮಾಡಿಕೊಂಡರು. ಆದರೆ ಮಾತುಕತೆಯ ಕುರಿತು ಅಮೆರಿಕದ ಕಡೆಯಿಂದ ಈವರೆಗೆ ಯಾವುದೇ ವಿವರ ಹೊರಬಂದಿಲ್ಲ.

ಪ್ರಸ್ತಾವಿತ ಭಾರತಅಮೆರಿಕ ವ್ಯಾಪಾರ ಒಪ್ಪಂದದ ಕುರಿತು ಮಾತುಕತೆ ನಡೆದಿದೆಯೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಜೂನ್‌ನಲ್ಲಿ ಫ್ರಾನ್‌್ಸನಲ್ಲಿ ನಡೆದ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್‌್ಡ ಟ್ರಂಪ್‌ ಅವರ ಭೇಟಿಯಲ್ಲಿ, ಸಮತೋಲಿತ, ಪರಸ್ಪರ ಪ್ರಯೋಜನಕಾರಿ ಹಾಗೂ ವಾಣಿಜ್ಯಾತ್ಮಕವಾಗಿ ಅರ್ಥಪೂರ್ಣ ವ್ಯಾಪಾರ ಒಪ್ಪಂದವನ್ನು ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿತ್ತು.
ಕಳೆದ ವರ್ಷ ಅಮೆರಿಕ ಭಾರತಕ್ಕೆ ಕಠಿಣ ಸುಂಕ ವಿಧಿಸಿದ ಬಳಿಕ ಉಭಯ ದೇಶಗಳ ಸಂಬಂಧದಲ್ಲಿ ಹಿನ್ನಡೆ ಉಂಟಾಗಿತ್ತು. 2025ರ ಮೇನಲ್ಲಿ ನಡೆದ ಭಾರತ-ಪಾಕಿಸ್ತಾನ ಸಂಘರ್ಷವನ್ನು ತಗ್ಗಿಸುವಲ್ಲಿ ತಾವು ಪ್ರಮುಖ ಪಾತ್ರ ವಹಿಸಿದ್ದಾಗಿ ಟ್ರಂಪ್‌ ನೀಡಿದ್ದ ಹೇಳಿಕೆಗಳೂ ಭಾರತದಲ್ಲಿ ತೀವ್ರ ಪ್ರತಿಕ್ರಿಯೆಗೆ ಕಾರಣವಾಗಿದ್ದವು.

ಭಾರತವು ಸಂಘರ್ಷ ಅಂತ್ಯಗೊಂಡಿದ್ದು ಉಭಯ ದೇಶಗಳ ನಡುವಿನ ನೇರ ಮಾತುಕತೆಯಿಂದಲೇ ಹೊರತು ಅಮೆರಿಕದ ಮಧ್ಯಸ್ಥಿಕೆಯಿಂದಲ್ಲ ಎಂದು ನಿರಂತರವಾಗಿ ಸ್ಪಷ್ಟಪಡಿಸಿತ್ತು.
ಇದರ ನಡುವೆ ಅಮೆರಿಕದ ಹೊಸ ವಲಸೆ ನೀತಿ ಹಾಗೂ -1 ವೀಸಾ ಶುಲ್ಕ ಹೆಚ್ಚಳವೂ ದ್ವಿಪಕ್ಷೀಯ ಸಂಬಂಧಗಳ ಮೇಲೆ ಪರಿಣಾಮ ಬೀರಿತ್ತು. ಆದಾಗ್ಯೂ, ಕಳೆದ ಕೆಲವು ತಿಂಗಳುಗಳಿಂದ ಎರಡೂ ದೇಶಗಳು ಸಂಬಂಧ ಸುಧಾರಣೆಗೆ ಪ್ರಯತ್ನ ನಡೆದಿದೆ.

RELATED ARTICLES
spot_img

Latest News