Saturday, November 23, 2024
Homeರಾಷ್ಟ್ರೀಯ | Nationalಕಾಜಿರಂಗದಲ್ಲಿ ನಾಳೆ ಮೋದಿ ಸಫಾರಿ

ಕಾಜಿರಂಗದಲ್ಲಿ ನಾಳೆ ಮೋದಿ ಸಫಾರಿ

ಗುವಾಹಟಿ, ಮಾ 7 (ಪಿಟಿಐ) : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡು ದಿನಗಳ ಅಸ್ಸಾಂ ಪ್ರವಾಸದಲ್ಲಿ ಸುಮಾರು 18,000 ಕೋಟಿ ರೂಪಾಯಿಗಳ ಯೋಜನೆಗಳ ಉದ್ಘಾಟನೆಗೆ ಅಡಿಪಾಯ ಹಾಕಲಿದ್ದಾರೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಇಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶರ್ಮಾ ಅವರು, ಮೋದಿ ಮೊದಲ ಬಾರಿಗೆ ಯುನೆಸ್ಕೋ ಪಾರಂಪರಿಕ ತಾಣವಾದ ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿ ಸಫಾರಿ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಮೋದಿ ನಾಳೆ ಮಧ್ಯಾಹ್ನ ಅಸ್ಸಾಂಗೆ ಆಗಮಿಸಲಿದ್ದು, ರಾತ್ರಿ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಮರುದಿನ, ಅವರು ಜೋರ್ಹತ್‍ನಲ್ಲಿ ಅಹೋಮ್ ಜನರಲ್ ಲಚಿತ್ ಬೊರ್ಫುಕನ್ ಅವರ 125 ಅಡಿ ಎತ್ತರದ ಪ್ರತಿಮೆಯನ್ನು ಉದ್ಘಾಟಿಸಲಿದ್ದಾರೆ, ನಂತರ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಶರ್ಮಾ ಹೇಳಿದರು. ಸಾರ್ವಜನಿಕ ಸಭೆಯ ಸ್ಥಳದಿಂದ ಅವರು ಸುಮಾರು 18,000 ಕೋಟಿ ರೂಪಾಯಿಗಳ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ಅವರು ಹೇಳಿದರು. ಕಾರ್ಯಕ್ರಮದ ನಂತರ ಅವರು ಪಶ್ಚಿಮ ಬಂಗಾಳಕ್ಕೆ ತೆರಳಲಿದ್ದಾರೆ ಎಂದು ಶರ್ಮಾ ತಿಳಿಸಿದ್ದಾರೆ.

RELATED ARTICLES

Latest News