Homeಬೆಂಗಳೂರುಬೈಕ್‌ಗೆ ಕಸದ ಲಾರಿ ಡಿಕ್ಕಿಯಾಗಿ ಯುವಕ ಸಾವು

ಬೈಕ್‌ಗೆ ಕಸದ ಲಾರಿ ಡಿಕ್ಕಿಯಾಗಿ ಯುವಕ ಸಾವು

ಬೆಂಗಳೂರು,ಆ.11-ಅತೀ ವೇಗ ಹಾಗೂ ಅಜಾಗರೂಕತೆಯಿಂದ ಮುನ್ನುಗ್ಗಿದ ಕಸದ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಪೀಣ್ಯ ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೈಕ್‌ ಸವಾರ ಮೊಹಮದ್‌ ಮೊಹಿನ್‌ (24) ಮೃತಪಟ್ಟವರು. ದ್ವಿಚಕ್ರ ವಾಹನಗಳ ರಿಪೇರಿ ಮಾಡುವ ಮೆಕ್ಯಾನಿಕ್‌ ಆಗಿ ಕೆಲಸ ಮಾಡುತ್ತಿದ್ದನು.ನಿನ್ನೆ ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಅಂಧರಹಳ್ಳಿ ಬಳಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೊಹಿನ್‌ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಅಪಘಾತದಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸುದ್ದಿ ತಿಳಿದು ಪೀಣ್ಯ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES
spot_img

Latest News