ಬೆಂಗಳೂರು,ಆ.11-ವಿಧಾನ ಸಭೆ ಮತ್ತು ವಿಧಾನ ಪರಿಷತ್ ಅಧಿವೇಶನ ಆ.13 ರಿಂದ 27 ರವರೆಗೆ ನಡೆಯಲಿರುವ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಲು 2ಕಿ.ಮೀ ವ್ಯಾಪ್ತಿಯಲ್ಲಿ ನಗರ ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್ ಸಿಂಗ್ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷಗಳು ಮತ್ತು ವಿವಿಧ ಸಂಘಟನೆಗಳು ತಮ ಬೇಡಿಕೆಗಳಿಗೆ ಒತ್ತಾಯಿಸಿ ಪ್ರತಿಭಟನೆ, ಧರಣಿ, ವಿಧಾನಸೌಧ ಮುತ್ತಿಗೆ ಕಾರ್ಯಕ್ರಮಗಳನ್ನು ಹಮಿಕೊಳ್ಳುವ ಸಾಧ್ಯತೆ ಇರುತ್ತದೆ.
ಹಾಗಾಗಿ ಅಧಿವೇಶನ ಕಾರ್ಯ ಕಲಾಪಗಳಿಗೆ ಅಡಚಣೆ ಉಂಟಾಗು ವುದಲ್ಲದೇ ಸಾರ್ವಜನಿಕ ನೆಮದಿಗೆ ಭಂಗ ಹಾಗೂ ಸುಮಗ ಸಂಚಾರಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇರುವುದರಿಂದ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ ಹೊರಡಿಸಲಾಗಿದೆ. ಆ.15 ರಂದು ವಿಧಾನ ಸೌಧದಲ್ಲಿ ಫ್ರೀಡಂ ಹಬ್ಬದ ಸಂಭ್ರಮಾಚರಣೆ ಕಾರ್ಯಕ್ರಮ ಹೊರತುಪಡಿಸಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಅವರು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
