Homeರಾಜ್ಯಜೈಲಿನಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಸಾರ್ಟ್‌ಫೋನ್‌‍ ಪತ್ತೆ, ಸಹಾಯಕ ಅಧೀಕ್ಷಕ ಅಮಾನತು

ಜೈಲಿನಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಸಾರ್ಟ್‌ಫೋನ್‌‍ ಪತ್ತೆ, ಸಹಾಯಕ ಅಧೀಕ್ಷಕ ಅಮಾನತು

Rape convict Prajwal Revanna found with Android phone inside Bengaluru jail

ಬೆಂಗಳೂರು, ಆ.12- ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಬ್ಯಾರಕ್‌ನಲ್ಲಿ ಆಂಡ್ರಾಯ್ಡ್ ಮೊಬೈಲ್‌ಫೋನ್‌‍ ಪತ್ತೆಯಾಗಿದೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ನಡೆಸಿದ ದಾಳಿಯ ವೇಳೆ ಫೋನ್‌ ವಶಪಡಿಸಿಕೊಳ್ಳಲಾಗಿದೆ ಎಂದು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಡಿಜಿಪಿ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ.

ಹೈ ಸೆಕ್ಯುರಿಟಿ ಜೈಲಿನಲ್ಲಿರುವ ಹೈಪ್ರೊಫೈಲ್‌ ಕೈದಿಗಳು ಹಾಗೂ ಇತರ ಕೈದಿಗಳನ್ನು ಗುರಿಯಾಗಿಸಿಕೊಂಡು ಸಿಸಿಬಿ ನಾಲ್ಕರಿಂದ ಐದು ಗಂಟೆಗಳ ಕಾಲ ತಪಾಸಣೆನಡೆಸಿತ್ತು. ಈ ವೇಳೆ ಪ್ರಜ್ವಲ್‌ ರೇವಣ್ಣ ಅವರ ಬ್ಯಾರಕ್‌ನಿಂದ ಒಂದು ಆಂಡ್ರಾಯ್ಡ್ ಫೋನ್‌ ವಶಪಡಿಸಿಕೊಳ್ಳಲಾಗಿದೆ ಎಂದು ಡಿಜಿಪಿ ಹೇಳಿದ್ದಾರೆ.

ಈ ಸಂಬಂಧ ಸಿಸಿಬಿ ಪರಪ್ಪನ ಅಗ್ರಹಾರ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದು, ಎಫ್‌ಐರ್ಆ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.ಕರ್ತವ್ಯಲೋಪದ ಆರೋಪದ ಹಿನ್ನೆಲೆಯಲ್ಲಿ ದಕ್ಷಿಣ ವಿಭಾಗದ ಡಿಐಜಿ ನೀಡಿದ ವರದಿ ಆಧರಿಸಿ ಸಹಾಯಕ ಅಧೀಕ್ಷಕ ಇರಣ್ಣ ರಂಗಾಪುರ ಅವರನ್ನು ಅಮಾನತುಗೊಳಿಸಲಾಗಿದೆ ಅಲ್ಲದೆ ಬೆಂಗಳೂರು ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ಕಾರಣ ಕೇಳಿ ನೋಟಿಸ್‌‍ ಜಾರಿ ಮಾಡಲಾಗಿದೆ.

ಈ ಘಟನೆ ಕುರಿತು ಸಮಗ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ಡಿಜಿಪಿ ತಿಳಿಸಿದ್ದಾರೆ. ತಪಾಸಣೆಯಲ್ಲಿ ಮೊಬೈಲ್‌ ಹೊರತುಪಡಿಸಿ ಯಾವುದೇ ಇತರ ನಿಷೇಧಿತ ವಸ್ತು ಪತ್ತೆಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

RELATED ARTICLES
spot_img

Latest News