ಬೆಂಗಳೂರು,ಆ.13- ಬಂದ್ ಹಿನ್ನೆಲೆಯಲ್ಲಿ ವಾಟಾಳ್ ನಾಗರಾಜ್ ಸೇರಿದಂತೆ 14 ಮಂದಿಯನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಂಡಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತಕುಮಾರ್ ಸಿಂಗ್ ತಿಳಿಸಿದ್ದಾರೆ.
ಈ ಸಂಜೆಯೊಂದಿಗೆ ಮಾತನಾಡಿದ ಅವರು, ಕೆಲವು ಕಡೆ ಪ್ರತಿಭಟನೆಗಳು ನಡೆದಿದ್ದು, ನಗರದಾದ್ಯಂತ ಬಂದ್ ಶಾಂತಿಯುತವಾಗಿತ್ತು ಎಂದು ಹೇಳಿದರು.
ಮೈಸೂರು ಬ್ಯಾಂಕ್ ಸರ್ಕಲ್, ಕೆ.ಆರ್.ಸರ್ಕಲ್, ಟೌನ್ಹಾಲ್, ಫ್ರೀಡಂಪಾರ್ಕ್ ಸೇರಿದಂತೆ ಮುಂತಾದ ಸ್ಥಳಗಳಲ್ಲಿ ಬಿಗಿಯಾದ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಲ್ಲಾ ಕಡೆ ನಮ ಸಿಬ್ಬಂದಿ ಇದ್ದಾರೆ. ಹಿರಿಯ ಅಧಿಕಾರಿಗಳು ಗಸ್ತು ಮಾಡುತ್ತಿದ್ದಾರೆ ಎಂದು ಆಯುಕ್ತರು ಹೇಳಿದರು.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗ ಹಮಿಕೊಂಡಿರುವ ಫ್ರೀಡಂ ಹಬ್ಬಕ್ಕೆ ಸೂಕ್ತ ಭದ್ರತೆ ನೀಡಲಾಗಿದೆ ಎಂದು ಅವರು ತಿಳಿಸಿದರು.
