ನಿತ್ಯ ನೀತಿ : ಅನ್ನ ಮಾಡುವವನ ಜಾತಿಯನ್ನು ನೀವು ಆಯ್ಕೆ ಮಾಡಿಕೊಳ್ಳಬಹುದೇ ಹೊರತು ಭತ್ತ ಬೆಳೆಯುವವನದ್ದಲ್ಲ.
ಪಂಚಾಂಗ : ಭಾನುವಾರ , 16-08-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ವರ್ಷಾ / ಮಾಸ: ಶ್ರಾವಣ / ಪಕ್ಷ: ಶುಕ್ಲ / ತಿಥಿ: ಚತುರ್ಥಿ / ನಕ್ಷತ್ರ: ಹಸ್ತ / ಯೋಗ: ಸಾಧ್ಯ / ಕರಣ: ಭವ
ಸೂರ್ಯೋದಯ – ಬೆ.6.08
ಸೂರ್ಯಾಸ್ತ – 06.42
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30
ರಾಶಿಭವಿಷ್ಯ :
ಮೇಷ: ಬಂಧುಗಳನ್ನು ವಿನಾಕಾರಣ ದ್ವೇಷಿಸುವಿರಿ.
ವೃಷಭ: ಕಚೇರಿ ಕೆಲಸವನ್ನು ಮನಃಪೂರ್ವಕವಾಗಿ ಮಾಡಿ. ಅನ್ಯರಿಗೆ ಉಪಕಾರ ಮಾಡುವಿರಿ.
ಮಿಥುನ: ಪದೇ ಪದೇ ಅನಾರೋಗ್ಯಕ್ಕೆ ತುತ್ತಾಗುವ ನೀವು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ.
ಕಟಕ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಸಿಂಹ: ಶತ್ರುಗಳನ್ನು ಜಯಿಸು ವಿರಿ. ನಿಮ್ಮ ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ.
ಕನ್ಯಾ: ಉನ್ನತ ಅ ಕಾರಿ ಭೇಟಿಗಾಗಿ ದಿನವಿಡೀ ಓಡಾಡಬೇಕಾದ ಪರಿಸ್ಥಿತಿ ಎದುರಾಗುವುದು.
ತುಲಾ: ಗಣ್ಯ ವ್ಯಕ್ತಿಗಳನ್ನು ಸಂಪರ್ಕಿಸುವಿರಿ. ತಾಯಿಯ ಆರೋಗ್ಯದಲ್ಲಿ ಚೇತರಿಕೆ.
ವೃಶ್ಚಿಕ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಧನುಸ್ಸು: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.
ಮಕರ: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಬಹಳ ಒಳ್ಳೆಯದು.
ಕುಂಭ: ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಯಾಗುವುದರಿಂದ ವೈದ್ಯರನ್ನು ಭೇಟಿ ಮಾಡಿ.
ಮೀನ: ಸಮಾಧಾನದಿಂದ ಕಾರ್ಯನಿರ್ವಹಿಸಿದರೆ ಜಯ ಕಟ್ಟಿಟ್ಟ ಬುತ್ತಿ ಎಂಬ ಅರಿವು ಇರಲಿ.
