Homeರಾಜ್ಯಹನೂರು ಎನ್ಕೌಂಟರ್ ಪ್ರಕರಣ : ನ್ಯಾಯಾಂಗ ತನಿಖೆಗೆ ಆರ್‌. ಅಶೋಕ್‌ ಆಗ್ರಹ

ಹನೂರು ಎನ್ಕೌಂಟರ್ ಪ್ರಕರಣ : ನ್ಯಾಯಾಂಗ ತನಿಖೆಗೆ ಆರ್‌. ಅಶೋಕ್‌ ಆಗ್ರಹ

Hanur encounter case: R. Ashok demands judicial investigation

ಬೆಂಗಳೂರು,ಆ.16- ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಮೂವರು ರೈತರ ಸಾವಿಗೆ ಕಾರಣವಾದ ಘಟನೆ ಕುರಿತು ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಜನಪ್ರತಿನಿಧಿಗಳು ನೀಡುತ್ತಿರುವ ಹೇಳಿಕೆಗಳಲ್ಲಿ ವೈರುಧ್ಯ ಕಂಡುಬರುತ್ತಿದ್ದು, ಪ್ರಕರಣದ ಸಂಪೂರ್ಣ ಸತ್ಯ ಹೊರಬರಲು ತಕ್ಷಣ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ತಮ ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಮೂವರು ರೈತರ ಸಾವಿನ ಪ್ರಕರಣದಲ್ಲಿ ಅರಣ್ಯ ಇಲಾಖೆ ಒಂದು ರೀತಿಯ ಹೇಳಿಕೆ ನೀಡುತ್ತಿದ್ದರೆ, ಸ್ಥಳೀಯ ಜನಪ್ರತಿನಿಧಿಗಳ ಹೇಳಿಕೆ ಮತ್ತೊಂದು ರೀತಿಯ ಮಾಹಿತಿ ನೀಡುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆಗಳಲ್ಲೂ ಹಲವು ಅನುಮಾನಗಳಿಗೆ ಸ್ಪಷ್ಟ ಉತ್ತರ ಸಿಗುತ್ತಿಲ್ಲ. ಹೀಗಾಗಿ ಘಟನೆಯ ನಿಜವಾದ ಹಿನ್ನೆಲೆ ಏನು ಎಂಬುದನ್ನು ಸರ್ಕಾರವೇ ಜನರಿಗೆ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಸರ್ಕಾರದ ಅಧೀನದಲ್ಲಿರುವ ವಿವಿಧ ಇಲಾಖೆಗಳ ಹೇಳಿಕೆಗಳಲ್ಲೇ ಪರಸ್ಪರ ತಾಳೆಯಾಗದಿರುವುದು ಗಂಭೀರ ವಿಚಾರವಾಗಿದೆ. ಮೂವರು ರೈತರ ಜೀವಹಾನಿಗೆ ಕಾರಣವಾದ ಘಟನೆಯಲ್ಲಿ ಅಧಿಕಾರದ ದುರುಪಯೋಗವಾಗಿದೆಯೇ, ನಿಯಮಗಳನ್ನು ಉಲ್ಲಂಘಿಸಲಾಗಿದೆಯೇ, ಗುಂಡಿನ ದಾಳಿ ಅನಿವಾರ್ಯವಾಗಿತ್ತೇ ಹಾಗೂ ಘಟನೆಯ ನಂತರ ಸಾಕ್ಷ್ಯಗಳನ್ನು ಸಮರ್ಪಕವಾಗಿ ಸಂರಕ್ಷಿಸಲಾಗಿದೆಯೇ ಎಂಬ ಹಲವು ಪ್ರಶ್ನೆಗಳಿಗೆ ಉತ್ತರ ದೊರೆಯಬೇಕಿದೆ ಎಂದು ಅವರು ಹೇಳಿದ್ದಾರೆ.

ಆಂತರಿಕ ಇಲಾಖಾ ತನಿಖೆಯಿಂದ ಪ್ರಕರಣದ ನಿಷ್ಪಕ್ಷಪಾತ ಸತ್ಯ ಹೊರಬರುವುದು ಸಾಧ್ಯವಿಲ್ಲ ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.ಆರೋಪದ ಕೇಂದ್ರದಲ್ಲಿರುವ ಇಲಾಖೆಯೇ ತನಿಖೆ ನಡೆಸುವುದು ನ್ಯಾಯಸಮತವಲ್ಲ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್‌‍ ಅಥವಾ ಅರಣ್ಯ ಇಲಾಖೆಯ ಆಂತರಿಕ ತನಿಖೆಯ ಬದಲಿಗೆ ಸ್ವತಂತ್ರ ನ್ಯಾಯಾಂಗ ತನಿಖೆಗೆ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೂಡಲೇ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು. ತನಿಖೆಯ ಮೂಲಕ ಮೂವರು ರೈತರ ಸಾವಿನ ಹಿಂದಿನ ಸಂಪೂರ್ಣ ಸತ್ಯವನ್ನು ಬಹಿರಂಗಪಡಿಸಿ, ತಪ್ಪಿತಸ್ಥರು ಯಾರೇ ಆಗಿದ್ದರೂಅರಣ್ಯ ಸಿಬ್ಬಂದಿಯಾಗಲಿ, ಅಧಿಕಾರಿಗಳಾಗಲಿ ಅಥವಾ ರಾಜಕೀಯ ಪ್ರಭಾವಿಗಳಾಗಲಿಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಆರ್‌.ಅಶೋಕ್‌ ಹೇಳಿದ್ದಾರೆ.

ಸರ್ಕಾರಕ್ಕೆ ಈ ಪ್ರಕರಣದಲ್ಲಿ ಮುಚ್ಚಿಡಲು ಏನೂ ಇಲ್ಲದಿದ್ದರೆ ನ್ಯಾಯಾಂಗ ತನಿಖೆಗೆ ಹಿಂಜರಿಯುವ ಅಗತ್ಯವೇನಿದೆ ಎಂದು ಪ್ರಶ್ನಿಸಿರುವ ಅವರು, ಅಮಾಯಕ ರೈತರ ಸಾವಿಗೆ ನ್ಯಾಯ ದೊರೆಯುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದ್ದಾರೆ.
ಮೂವರು ರೈತರ ಸಾವಿನ ಪ್ರಕರಣವು ಕೇವಲ ಒಂದು ಇಲಾಖೆಯ ಕ್ರಮದ ಪ್ರಶ್ನೆಯಾಗಿರದೆ, ಸರ್ಕಾರದ ಆಡಳಿತಾತಕ ಹೊಣೆಗಾರಿಕೆ, ಅಧಿಕಾರಿಗಳ ಕ್ರಮ ಮತ್ತು ಕಾನೂನು ಪಾಲನೆಯ ಕುರಿತ ಗಂಭೀರ ಪ್ರಶ್ನೆಗಳನ್ನು ಎತ್ತಿರುವ ಹಿನ್ನೆಲೆಯಲ್ಲಿ, ನಿಷ್ಪಕ್ಷಪಾತ ತನಿಖೆಯ ಮೂಲಕ ಸತ್ಯವನ್ನು ಹೊರತರಬೇಕೆಂಬುದು ಒತ್ತಾಯಿದ್ದಾರೆ

RELATED ARTICLES
spot_img

Latest News