ಬೆಂಗಳೂರು, ಆ.17- ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಇಂದು ಕೊನೆ ದಿನವಾಗಿದೆ. ರಾಜ್ಯದಾದ್ಯಂತ ಒಟ್ಟು 5. 54, 32, 314 ಎನ್ಯುಮರೇಷನ್ ಫಾರಂಗಳನ್ನು ಹಂಚಿಕೆ ಮಾಡಲಾಗಿದೆ. ಅವುಗಳ 100% ಡಿಜಿಟಲೀಕರಣ ಪ್ರಕ್ರಿಯೆ ಯನ್ನೂ ಪೂರ್ಣಗೊಳಿಸಲಾಗಿದೆ.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ರಾಜ್ಯದಾದ್ಯಂತ 1. 8, 34, 595 ಮಂದಿ ಎಸ್‌ಡಿಡಿಒ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.ಮುಂದಿನ ಹಂತವಾಗಿ ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ. ಕರಡು ಪಟ್ಟಿಗೆ ಸಂಬಂಧಿಸಿದಂತೆ ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಸಾರ್ವಜನಿಕರಿಗೆ ಆಕ್ಷೇಪಣೆ ಹಾಗೂ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಸಾರ್ವಜನಿಕರಿಂದ ಸ್ವೀಕರಿಸುವ ಆಕ್ಷೇಪಣೆ ಮತ್ತು ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ಅಂತಿಮ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲು ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ.
ಹೀಗಾಗಿ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು, ವಿವರಗಳು ಸರಿಯಾಗಿವೆಯೇ ಎಂಬುದನ್ನು ಪರಿಶೀಲಿಸಿ, ಯಾವುದೇ ಲೋಪ ಅಥವಾ ಆಕ್ಷೇಪಣೆ ಕಂಡುಬಂದಲ್ಲಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಮತದಾರರಿಗೆ ಸೂಚಿಸಲಾಗಿದೆ.
