Homeಜಿಲ್ಲಾ ಸುದ್ದಿಗಳುಪಿಲ್ಲರ್‌ ಕುಸಿದು ಬಿದ್ದು ವಿದ್ಯಾರ್ಥಿ ಸಾವು

ಪಿಲ್ಲರ್‌ ಕುಸಿದು ಬಿದ್ದು ವಿದ್ಯಾರ್ಥಿ ಸಾವು

ತುಮಕೂರು,ಆ.18- ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿಯ ಮೇಲೆ ಏಕಾಏಕಿ ಪಿಲ್ಲರ್‌ ಕುಸಿದು ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬಿಳಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮತ್ತಿಗಟ್ಟ ಗ್ರಾಮದ ಧನುಷ್‌ (10) ಮೃತ ವಿದ್ಯಾರ್ಥಿ.ಬಿಳಗಿಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4 ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು ಬೆಳಿಗ್ಗೆ ಎಂದಿನಂತೆ ವಿದ್ಯಾರ್ಥಿ ಶಾಲೆಗೆ ಬಂದಿದ್ದ.

ಶಾಲೆ ಆರಂಭಕ್ಕೂ ಮುನ್ನ ಸ್ನೇಹಿತರೊಂದಿಗೆ ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ ವೇಳೆ ಶಾಲೆಯ ಪಕ್ಕದಲ್ಲಿರುವ ಕಟ್ಟಡವೊಂದರ ಪಿಲ್ಲರ್‌ ಏಕಾಏಕಿ ಕುಸಿದು ಧನುಷ್‌ ಮೇಲೆ ಬಿದ್ದಿದೆ.
ನೇರವಾಗಿ ತಲೆಯ ಮೇಲೆ ಕಂಬ ಬಿದ್ದ ಪರಿಣಾಮ ತೀವ್ರ ರಕ್ತಸ್ರಾವದಿಂದ ಧನುಷ್‌ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆ ಹಂದನಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES
spot_img

Latest News