Homeರಾಜ್ಯವರಮಹಾಲಕ್ಷ್ಮೀ ಹಬ್ಬ : ಗೊರವನಹಳ್ಳಿ ಮಹಾಲಕ್ಷ್ಮೀ ದೇವಿ ದರ್ಶನಕ್ಕೆ ಹರಿದುಬಂದ ಭಕ್ತಸಾಗರ

ವರಮಹಾಲಕ್ಷ್ಮೀ ಹಬ್ಬ : ಗೊರವನಹಳ್ಳಿ ಮಹಾಲಕ್ಷ್ಮೀ ದೇವಿ ದರ್ಶನಕ್ಕೆ ಹರಿದುಬಂದ ಭಕ್ತಸಾಗರ

ಕೊರಟಗೆರೆ, ಆ.21- ವರಮಹಾಲಕ್ಷ್ಮೀ ಹಬ್ಬದ ಹಿನ್ನಲೆಯಲ್ಲಿ ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯಕ್ಕೆ ಇಂದು ಭಕ್ತರ ದಂಡೇ ಹರಿದು ಬಂದಿತ್ತು. ಮುಂಜಾನೆಯಿಂದಲೇ ಮಹಾಲಕ್ಷಿ ್ಮೕ ದೇವಿಗೆ ಅಭಿಷೇಕ, ಕುಂಕುಮಾರ್ಚನೆ, ಕ್ಷೀರಾಭಿಷೆಕ ಸೇರಿದಂತೆ ವಿವಿಧ ಪೂಜಾ-ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ನೆರವೇರಿದವು.

ಅಮ್ಮನವರಿಗೆ ವಿವಿಧ ಬಗೆಯ ಹೂಗಳಿಂದ ಅಲಂಕಾರ ಮಾಡಲಾಗಿದ್ದು, ಭಕ್ತರ ಗಮನ ಸೆಳೆಯಿತು. ದೇವಾಲಯದ ಆವರಣದಲ್ಲಿ ವಿವಿಧ ಬಗೆಯ ಹೂ-ಹಣ್ಣುಗಳಿಂದ ಮಾಡಲಾಗಿದ್ದ ಅಲಂಕಾರ ಭಕ್ತರ ಮನಸೂರೆಗೊಂಡಿತು.

ಮಹಾಲಕ್ಷ್ಮೀ ಸನ್ನಿಧಾನಕ್ಕೆ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ತುಮಕೂರು, ಬೆಂಗಳೂರು, ರಾಮನಗರ, ಕೊಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಸೇರಿದಂತೆ ರಾಜ್ಯದ ನಾನಾ ಕಡೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಸರದಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಶ್ರೀ ಗೊರವನಹಳ್ಳಿ ಮಹಾಲಕ್ಷ್ಮೀ ಚಾರಿಟಬಲ್‌ ಟ್ರಸ್‌್ಟನಿಂದ ಪುಣ್ಯಕ್ಷೇತ್ರಕ್ಕೆ ಬರುವ ಭಕ್ತರಿಗೆ ಕುಡಿಯುವ ನೀರು, ಪ್ರಸಾದ ವ್ಯವಸ್ಥೆ ಸೇರಿದಂತೆ ಸಕಲ ವ್ಯವಸ್ಥೆಯನ್ನೂ ಕೂಡ ಮಾಡಲಾಗಿತ್ತು.

ಕಳೆದ ಹತ್ತು ವರ್ಷಗಳಿಂದ ವರಾಮಹಾಲಕ್ಷ್ಮಿ ಹಬ್ಬದ ದಿನ ಕ್ಷೇತ್ರಕ್ಕೆ ಆಗಮಿಸಿ ದೇವಿಯ ದರ್ಶನ ಪಡೆಯುತ್ತಿದ್ದೇವೆ ನಮಗೆ ಒಳ್ಳೆಯದಾಗಿದೆ. ಅಮ್ಮನವರ ಸನ್ನಿಧಾನಕ್ಕೆ ಬಂದು ಶ್ರದ್ಧೆ-ಭಕ್ತಿಯಿಂದ ಪೂಜೆ ಸಲ್ಲಿಸಿದರೆ ಆರೋಗ್ಯ, ಐಶ್ವರ್ಯ, ಸಕಲ ಸಂಪತ್ತು ಲಭಿಸಲಿದೆ ಎಂದು ಬೆಂಗಳೂರಿನ ಭಕ್ತರೊಬ್ಬರು ತಿಳಿಸಿದ್ದಾರೆ.

ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಭಕ್ತರ ಅನುಕೂಲಕ್ಕಾಗಿ ದರ್ಶನ, ಪ್ರಸಾದ, ದಾಸೋಹ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಮಹಿಳಾ ಭಕ್ತರಿಗೆ ಅರಿಶಿನ-ಕುಂಕುಮ ಮತ್ತು ಹಸಿರು ಬಳೆ ವಿತರಿಸಲಾಗುವುದು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಭಕ್ತರು ಶಾಂತಿ-ಶಿಸ್ತು ಹಾಗೂ ಭಕ್ತಿಭಾವದಿಂದ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಅಮ್ಮನವರ ಕೃಪೆಗೆ ಪಾತ್ರರಾಗುವಂತೆ ಕೋರಲಾಗಿದೆ.
-ವಾಸುದೇವ್‌, ಅಧ್ಯಕ್ಷರು,
ಗೊರವನಹಳ್ಳಿ ಮಹಾಲಕ್ಷ್ಮಿ ಚಾರಿಟಬಲ್‌ ಟ್ರಸ್‌್ಟ

RELATED ARTICLES
spot_img

Latest News