Monday, November 25, 2024
Homeರಾಜ್ಯಗ್ಯಾರಂಟಿ ಯೋಜನೆಗಳಿಗೆ ಆರ್ಥಿಕ ಸಮಸ್ಯೆ ಇಲ್ಲ : ಸಿಎಂ

ಗ್ಯಾರಂಟಿ ಯೋಜನೆಗಳಿಗೆ ಆರ್ಥಿಕ ಸಮಸ್ಯೆ ಇಲ್ಲ : ಸಿಎಂ

ಮೈಸೂರು, ಅ. 7- ರಾಜ್ಯ ಸರ್ಕಾರ ನೀಡುತ್ತಿರುವ ಯಾವುದೇ ಗ್ಯಾರಂಟಿ ಯೋಜನೆ ಗಳಿಗೆ ಆರ್ಥಿಕ ಸಮಸ್ಯೆ ಇಲ್ಲ. ಎಲ್ಲವೂ ವ್ಯವಸ್ಥಿತವಾಗಿ ನಡೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಕೇಂದ್ರ ಸರ್ಕಾರಕ್ಕೆ 4860 ಕೋಟಿ ರೂ. ಬರ ಪರಿಹಾರಕ್ಕಾಗಿ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯಾದ್ಯಂತ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 30 ಸಾವಿರಕ್ಕೂ ಹೆಚ್ಚು ಬೆಳೆ ನಾಶ ಆಗಿದೆ. ಕೇಂದ್ರ ಸರ್ಕಾರ ಮೂರು ತಂಡಗಳನ್ನು ರಾಜ್ಯಕ್ಕೆ ಕಳುಹಿಸಿದೆ. ತಂಡದ ಸದಸ್ಯರು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಆನಂತರ ಕೇಂದ್ರ ಸರ್ಕಾರ ತಜ್ಞರು ನೀಡಿದ ವರದಿಯನ್ನು ಪರಿಶೀಲಿಸಿ ಹಣ ಬಿಡುಗಡೆ ಮಾಡಲಿದೆ ಎಂದವರು ತಿಳಿಸಿದರು.

ಬಿಎಸ್‍ವೈ ರಾಜ್ಯ ಪ್ರವಾಸಕ್ಕೆ ವರಿಷ್ಠರಿಂದ ಇನ್ನೂ ಸಿಕ್ಕಿಲ್ಲ ಅನುಮತಿ

ಕಳೆದ 70 ವರ್ಷಗಳಿಂದಲೂ ಹಿಂದುಳಿದಿರುವವರನ್ನು ಜಾತಿ ಜನಗಣತಿ ಆಧಾರದಲ್ಲಿ ಗುರುತಿಸಿ ಅವರನ್ನು ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಜಾತಿ ಆಧಾರಿತ ಗಣತಿಯನ್ನು ನಡೆಸಲಾಗುವುದು ಎಂದವರು ತಿಳಿಸಿದರು.ಕುಮಾರಸ್ವಾಮಿ ಮುಖ್ಯ ಮಂತ್ರಿ ಆಗಿದ್ದಾಗಲೇ ಕಾಂತ ರಾಜು ಅವರು ಕರ್ನಾಟಕದಲ್ಲಿನ ಜಾತಿ ಗಣತಿ ವರದಿ ನೀಡಿದ್ದರು. ಆದರೆ ಕುಮಾರಸ್ವಾಮಿ ಅವರು ವರದಿಯನ್ನು ಸ್ವೀಕರಿಸಲಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಹಾಗಾಗಿ ಈಗ ಬೇರೆಯವರು ಅಧ್ಯಕ್ಷರಾಗಿದ್ದಾರೆ. ನಾನು ಅವರಿಗೆ ಹೇಳಿದ್ದೇನೆ. ಆದಷ್ಟು ಬೇಗ ಕಾಂತರಾಜು ನೀಡಿದಂತೆ ವರದಿ ನೀಡುವಂತೆ ತಿಳಿಸಿದ್ದೇನೆ. ಅವರು ನವೆಂಬರ್‍ನಲ್ಲಿ ವರದಿ ನೀಡುವುದಾಗಿ ತಿಳಿಸಿದ್ದಾರೆ ಎಂದರು.

ಮುಖ್ಯಮಂತ್ರಿಗಳು ರಾಜ್ಯದಲ್ಲಿ ಎಲ್ಲಿಯೂ ಹೊಸದಾಗಿ ಮದ್ಯದಂಗಡಿ ತೆರೆಯಲು ಹೊಸ ರಹದಾರಿ ನೀಡುವುದಿಲ್ಲ. ಸಾರ್ವಜನಿಕರ ಅಭಿಪ್ರಾಯ ಹೇಗಿದೆಯೋ ಅದರ ಆಧಾರದ ಮೇಲೆ ನಾವು ಕ್ರಮ ಕೈಗೊಳ್ಳುತ್ತವೆ. ಒಟ್ಟಿನಲ್ಲಿ ಸದ್ಯದಲ್ಲಿ ಯಾವುದೇ ಲಿಕ್ಕರ್ ಅಂಗಡಿಗಳನ್ನು ತಡೆಯಲು ರಹದಾರಿ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ದಾಖಲೆ 100 ಪದಕ ಸಾಧನೆ

ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಹಿಂದೆಯೂ ಮಹಿಷ ದಸರಾ ಮಾಡಿದ್ದರು. ಆದರೆ ಚಾಮುಂಡಿ ಬೆಟ್ಟದಲ್ಲಿ ಮಾಡಿರಲಿಲ್ಲ. ಈ ಕುರಿತು ಜಿಲ್ಲಾಡಳಿತ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ತಿಳಿಸಿದರು.

RELATED ARTICLES

Latest News