Homeರಾಜ್ಯಯುವ ಸಮುದಾಯಕ್ಕೆ ಸಂಸದೀಯ ವ್ಯವಸ್ಥೆ ಪರಿಚಯಿಸಲು 'ಯುವ ಸಂಸತ್‌' ಕಾರ್ಯಕ್ರಮ

ಯುವ ಸಮುದಾಯಕ್ಕೆ ಸಂಸದೀಯ ವ್ಯವಸ್ಥೆ ಪರಿಚಯಿಸಲು ‘ಯುವ ಸಂಸತ್‌’ ಕಾರ್ಯಕ್ರಮ

ಬೆಂಗಳೂರು,ಸೆ.11- ಯುವ ಸಮುದಾಯಕ್ಕೆ ದೇಶದ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸುವ ಉದ್ದೇಶದಿಂದ ರಾಜ್ಯಾದ್ಯಂತ ಯುವ ಸಂಸತ್‌ ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ ಎಂದು ಸಮಾಜಕಲ್ಯಾಣ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.15 ರಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ರಾಜ್ಯಮಟ್ಟದ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಹಾಗೂ ಯುವ ಸಂಸತ್‌ ಸಭೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಚಾಲನೆ ನೀಡಲಿದ್ದಾರೆ.

ಅಂದು ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಸತ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದರು.

ತಾಲ್ಲೂಕು ಮಟ್ಟದಲ್ಲಿ ಸೆ.16 ರಿಂದ ಅಕ್ಟೋಬರ್‌ 10 ರವರೆಗೆ ಯುವ ಸಂಸತ್‌ ಸಭೆಯ ಕಾರ್ಯಕ್ರಮ ಆಯೋಜಿಸಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟದ ಯುವ ಸಂಸತ್‌ ಸಭೆಗೆ ಕಳುಹಿಸಲಾಗುತ್ತದೆ. ಅ.11 ರಿಂದ ಅ.30 ರವರೆಗೆ ಜಿಲ್ಲಾಮಟ್ಟದ ಯುವ ಸಂಸತ್‌ ಸಭೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ರಾಜ್ಯಮಟ್ಟದ ಸಂಸತ್‌ ಸಭೆಗೆ ಕಳುಹಿಸಲಾಗುತ್ತದೆ.
ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬ ವಿದ್ಯಾರ್ಥಿಯಂತೆ ಆಯ್ಕೆ ಮಾಡಲಾಗುತ್ತದೆ. ನ.26 ರಂದು ಸಂವಿಧಾನ ದಿನಾಚರಣೆಯಂದು ರಾಜ್ಯಮಟ್ಟದ ಯುವ ಸಂಸತ್‌ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಈಗಾಗಲೇ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಕಾರ್ಯಕ್ರಮಗಳ ಆಯೋಜನೆಗೆ ಸಂಬಂಧಪಟ್ಟಂತೆ ವಿಡಿಯೋ ಕಾನ್ಫರೆನ್‌್ಸ ಮೂಲಕ ಸಭೆ ನಡೆಸಿ ಸಲಹೆ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಇ ಡಿ ದಾಳಿಗೆ ಜಗ್ಗುವುದಿಲ್ಲ :
ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿಯವರು ಇಡಿ ದಾಳಿಗೆ ಜಗ್ಗುವುದಿಲ್ಲ. ಅವರು ಆರೋಪಮುಕ್ತರಾಗುತ್ತಾರೆ ಎಂಬ ವಿಶ್ವಾಸವಿದೆ. ಬಿಜೆಪಿ ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಜಕೀಯ ಕಾರಣಕ್ಕಾಗಿ ಇಡಿ ದಾಳಿ ನಡೆಯಬಾರದು. ಹಾಗಾದರೆ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತದೆ.

ನ್ಯಾಯಸಮತವಾಗಿ ದಾಳಿಗಳನ್ನು ನಡೆಸಿದರೆ ನಮಗೆ ಅಭ್ಯಂತರವಿಲ್ಲ. ಆದರೆ ರಾಜಕೀಯ ಪ್ರೇರಿತ ದಾಳಿಗಳನ್ನು ಖಂಡಿಸುತ್ತೇವೆ. 2029ರ ಲೋಕಸಭೆ ಚುನಾವಣೆಯಲ್ಲಿ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ. ಕಾಂಗ್ರೆಸ್‌‍ ಹಾಗೂ ಅದರ ಮಿತ್ರಪಕ್ಷಗಳ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ರಾಹುಲ್‌ಗಾಂಧಿಯವರು ಪ್ರಧಾನಿಯಾಗಲಿದ್ದಾರೆ ಎಂದು ಮುನಿಯಪ್ಪ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

RELATED ARTICLES
spot_img

Latest News