Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-09-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-09-2026)

ನಿತ್ಯ ನೀತಿ : ಕುಳಿತು ತುಕ್ಕು ಹಿಡಿಯುವುದಕ್ಕಿಂತ ದುಡಿದು ಸವೆಯುವುದು ಮೇಲು

ಪಂಚಾಂಗ : ಬುಧವಾರ, 16-09-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಭಾದ್ರಪದ / ಪಕ್ಷ: ಶುಕ್ಲ / ತಿಥಿ: ಪಂಚಮಿ / ನಕ್ಷತ್ರ: ವಿಶಾಖಾ / ಯೋಗ: ವೈಧೃತಿ / ಕರಣ: ಕೌಲವ
ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.22
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00

ರಾಶಿಭವಿಷ್ಯ :
ಮೇಷ: ಮಾಡಬೇಕೆಂದುಕೊಂಡಿರುವ ಒಳ್ಳೆಯ ಕೆಲಸ ವನ್ನು ಇಂದಿನಿಂದಲೇ ಆರಂಭಿಸಿ.
ವೃಷಭ: ಹೊಸ ಪ್ರದೇಶಕ್ಕೆ ಭೇಟಿ ನೀಡಿ ಒಳ್ಳೆಯ ಅನುಭವ ಪಡೆದುಕೊಳ್ಳಲು ಅವಕಾಶ ಸಿಗಲಿದೆ.
ಮಿಥುನ: ವಿದ್ಯೆ ಸಂಪಾದನೆ ಕಡೆ ಗಮನ ಹರಿಸಿದರೆ ಯಶಸ್ಸು ಸಾಧಿಸುವಿರಿ.

ಕಟಕ: ಸ್ನೇಹಿತರಿಂದಲೇ ಕೆಟ್ಟ ಮಾತು ಕೇಳಬೇಕಾದ ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ.
ಸಿಂಹ: ಗುರು-ಹಿರಿಯ ರೊಂದಿಗೆ ಸಮಾಲೋಚನೆ ನಡೆಸುವಿರಿ. ಬಂಧುಗಳಿಂದ ಸಮಸ್ಯೆ ಬಗೆಹರಿಯಲಿದೆ.
ಕನ್ಯಾ: ಷೇರು ವ್ಯವಹಾರ ದಲ್ಲಿ ತೊಡಗಿಕೊಂಡವರಿಗೆ ಸ್ವಲ್ಪ ಮಟ್ಟಿನ ಲಾಭ ಸಿಗಲಿದೆ.

ತುಲಾ: ತಂದೆ-ತಾಯಿಯ ಆರೋಗ್ಯದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು.
ವೃಶ್ಚಿಕ: ಯಾವುದೋ ವಿಚಾರ ಮನಸ್ಸಿನಲ್ಲಿಟ್ಟು ಕೊಂಡು ಕೊರಗುವುದು ಸರಿಯಲ್ಲ.
ಧನುಸ್ಸು: ಲೇವಾದೇವಿ ವ್ಯವಹಾರದಲ್ಲಿ ಧನಲಾಭವಿದೆ. ಸಮಾಧಾನದಿಂದ ವ್ಯವಹರಿಸಿ.

ಮಕರ: ನೌಕರರಿಗೆ ಸ್ಥಾನ ಬದಲಾವಣೆ ಅಥವಾ ವರ್ಗಾವಣೆಯಾಗುವ ಸಾಧ್ಯತೆಗಳಿವೆ.
ಕುಂಭ: ಆಸ್ತಿ ಸಂಬಂಧಿತ ತಗಾದೆಗಳಿಗೆ ನ್ಯಾಯವಾದಿಗಳ ಸಲಹೆ ಪಡೆಯಿರಿ.
ಮೀನ: ಸರ್ಕಾರಿ ಕೆಲಸ-ಕಾರ್ಯಗಳಿಂದ ಅನುಕೂಲವಾಗಲಿದೆ. ಆತ್ಮಗೌರವ ಹೆಚ್ಚಾಗಲಿದೆ.

RELATED ARTICLES
spot_img

Latest News