Homeಬೆಂಗಳೂರುಗಣೇಶೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಪೊಲೀಸರಿಂದ ಪಥ ಸಂಚಲನ

ಗಣೇಶೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಪೊಲೀಸರಿಂದ ಪಥ ಸಂಚಲನ

ಬೆಂಗಳೂರು, ಸೆ.16- ಗಣೇಶೋತ್ಸವದ ಹಿನ್ನೆಲೆಯಲ್ಲಿ ನಗರದ ಪೂರ್ವ ವಿಭಾಗದಲ್ಲಿ ನಿನ್ನೆ ಪೊಲೀಸ್‌‍ ರೂಟ್‌ ಮಾರ್ಚ್‌ ನಡೆಸಲಾಯಿತು. ಈ ರೂಟ್‌ ಮಾರ್ಚ್‌ನಲ್ಲಿ ಆರ್‌.ಎ.ಎಫ್‌. ತುಕಡಿ, ಪೊಲೀಸ್‌‍ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು. ಪ್ರಮುಖ ರಸ್ತೆಗಳು, ಸೂಕ್ಷ್ಮ ಪ್ರದೇಶಗಳು, ಗಣೇಶ ಮೂರ್ತಿ ಪ್ರತಿಷ್ಠಾಪನಾ ಸ್ಥಳಗಳು ಹಾಗೂ ಮೆರವಣಿಗೆ ಸಾಗುವ ರಸ್ತೆಗಳಲ್ಲಿ ಪಥ ಸಂಚಲನ ನಡೆಸಲಾಯಿತು.

ಗಣೇಶೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಸುರಕ್ಷತೆಯ ಭಾವನೆ ಮೂಡಿಸುವುದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಹಾಗೂ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕೆ ವಹಿಸುವ ಉದ್ದೇಶದಿಂದ ಈ ರೂಟ್‌ ಮಾರ್ಚ್‌ ಆಯೋಜಿಸಲಾಗಿತ್ತು.

ಮೆರವಣೆಗೆಯ ಸಂದರ್ಭದಲ್ಲಿ ನಿಗದಿಪಡಿಸಿರುವ ಮಾರ್ಗ ಮತ್ತು ಸಮಯವನ್ನು ಪಾಲಿಸುವುದು, ಸಾರ್ವಜನಿಕರಿಗೆ ಹಾಗೂ ವಾಹನಗಳ ಸಂಚಾರಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸುವುದು, ಧ್ವನಿ ವರ್ಧಕಗಳ ಬಳಕೆಯಲ್ಲಿ ನಿಗದಿತ ನಿಯಮಗಳನ್ನು ಪಾಲಿಸುವುದು ಹಾಗೂ ಯಾವುದೇ ರೀತಿಯ ಪ್ರಚೋದನಾಕಾರಿ ಘೋಷಣೆ, ಪೋಸ್ಟರ್‌ ಅಥವಾ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಸಂಘಟಕರು ಮತ್ತು ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

RELATED ARTICLES
spot_img

Latest News