ರಾಮನಗರ,ಸೆ.1- ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ಪಟ್ಟಣದಲ್ಲಿ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದು, ಏಳು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಸಂತೋಷ್ (35), ಸತೀಶ್ (36), ಸಂಪತ್ (33), ರಾಜೇಶ್ (34), ರೇಣುಕ ರಾಜ್ (31), ಶಿವರಾಜ್ (42) ಹಾಗೂ ಗೋವಿಂದರಾಜ್ (50) ಎಂದು ಗುರುತಿಸಲಾಗಿದೆ.
ರಾಮನಗರ ಪಟ್ಟಣದ ಐಜೂರು ಪೊಲೀಸ್ ಠಾಣೆ ವ್ಯಾಪ್ತಿಯ ಹೊಸದಾಗಿ ನಿರ್ಮಿಸಲಾದ ಮನೆಯೊಂದರಲ್ಲಿ ನಕಲಿ ನೋಟುಗಳನ್ನು ಮುದ್ರಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಏಳು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ ಸುಮಾರು 5 ಲಕ್ಷ ರೂ. ಮೌಲ್ಯದ ನಕಲಿ ನೋಟು,ಮುದ್ರಣ ಹಂತದಲ್ಲಿದ್ದ ಕಾಗದದ ಕಟ್ಟುಗಳು ಹಾಗೂ ನಕಲಿ ಖೋಟಾ ನೋಟು ತಯಾರಿಕೆಗೆ ಬಳಸಲಾಗುತ್ತಿತ್ತು ಎನ್ನಲಾದ ರಾಸಾಯನಿಕ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಸಂಬಂಧ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Fake Currency Manufacturing In Ramanagara
