ಹೈದರಾಬಾದ್, ಸೆ.17- ಗಣೇಶ ಮೂರ್ತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಆರು ಬಾಲಕರು ಸಾವನ್ನಪ್ಪಿದ ದುರ್ಘಟನೆ ಪೆದ್ದ ಕಂಜಲ್ಟ ಗ್ರಾಮದಲ್ಲಿ ನಡೆದಿದೆ.ಮೃತ ಬಾಲಕರು ಸಮೀಪದ ದತ್ತಿ ಸಂಸ್ಥೆಯೊಂದು ನಡೆಸುತ್ತಿರುವ ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು.
ಸ್ಥಳೀಯರು ನಡೆಸಿದ ಗಣೇಶೋತ್ಸವದ ನಂತರ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯಲ್ಲಿ ಈ ಬಾಲಕರು ಭಾಗಿಯಾಗಿದ್ದರು.ನೀರಿಗೆ ಇಳಿದಾಗ ಕೆಲವರು ಮುಳುಗಿದ್ದು, ಇಬ್ಬರು ಈಜಿಕೊಂಡು ದಡ ಸೇರಿದ್ದಾರೆ. ಉಳಿದ ಆರು ಮಂದಿ ಸಾವನ್ನಪ್ಪಿದ್ದಾರೆ.
ಈ ವೇಳೆ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರು ಬಾಲಕನನ್ನು ರಕ್ಷಿಸಲು ಪ್ರಯತ್ನಿಸಿದರೂ ಬದುಕಿಸಲು ಸಾಧ್ಯವಾಗಲಿಲ್ಲ.ಆ ಕೆರೆಯು ಜನಸಂಚಾರವಿಲ್ಲದ ಏಕಾಂತ ಪ್ರದೇಶದಲ್ಲಿತ್ತು. ಬಾಲಕರನ್ನು ರಕ್ಷಿಸಲು ಪ್ರಯತ್ನಿಸಬಹುದಾದ ಯಾವುದೇ ವಯಸ್ಕರು ಅಲ್ಲಿ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆರೆಯಲ್ಲಿದ್ದ ಕೆಸರು ಈ ದುರಂತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.ತೆಲಂಗಾಣ ರಾಜ್ಯಪಾಲ ಶಿವ ಪ್ರತಾಪ್ ಶುಕ್ಲಾ, ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಮತ್ತು ಹಲವು ನಾಯಕರು ದುರಂತಕ್ಕೆ ಆಘಾತ ವ್ಯಕ್ತಪಡಿಸಿ ಸಂತಾಪ ಸೂಚಿಸಿದ್ದಾರೆ.
