Homeರಾಜ್ಯಹೆದ್ದಾರಿಯಲ್ಲಿ ಕಾರು ಪಲ್ಟಿ ಮೂವರು ಯುವಕರ ಸಾವು

ಹೆದ್ದಾರಿಯಲ್ಲಿ ಕಾರು ಪಲ್ಟಿ ಮೂವರು ಯುವಕರ ಸಾವು

ಹುಬ್ಬಳ್ಳಿ,ಸೆ.1- ಮುಂದೆ ಸಾಗುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆಯು ವುದನ್ನು ತಪ್ಪಿಸಲು ಹೋಗಿ ಕಾರೊಂದು ಡಿವೈಡರ್‌ ಮೇಲೆ ಹತ್ತಿ ರಸ್ತೆಯಲ್ಲೇ ಪಲ್ಟಿಯಾದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡದ ಗರಗ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಮಂಜುನಾಥ (29), ವಿನಾಯಕ (27) ಹಾಗೂ ಬಸವರಾಜ (33) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ಹರಿಹರ ಮೂಲದವರಾಗಿದ್ದು, ಧಾರವಾಡದಲ್ಲಿ ಕ್ಯಾಟರಿಂಗ್‌ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಗಾಯಗೊಂಡಿರುವ ಹೊಸಯಲ್ಲಾಪುರದ ಬಸನಗೌಡ ಯಲ್ಲಪ್ಪಗೌಡ ಪಾಟೀಲ (26), ದಾವಣಗೆರೆಯ ಅಭಿಷೇಕ್‌ ಮಂಜಪ್ಪ ಕೆ.ಆರ್‌. (30) ಹಾಗೂ ಅಜಯ್‌ ಮಂಜಪ್ಪ ಕೆ.ಆರ್‌. (26) ಎಂಬುವವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ-ಧಾರವಾಡ ರಾಷ್ಟ್ರೀಯ ಹೆದ್ದಾರಿಯ ವೆಂಕಟಾಪುರ ಗ್ರಾಮದ ಬಳಿ ಇಂದು ನಸುಕಿನ ಜಾವ ಸುಮಾರು 3.20ರ ವೇಳೆಗೆ ಈ ದುರ್ಘಟನೆ ನಡೆದಿದೆ.

ಆರು ಮಂದಿ ಪ್ರಯಾಣಿಸುತ್ತಿದ್ದ ಈ ಕಾರು ಬೆಳಗಾವಿಯಿಂದ ಧಾರವಾಡದತ್ತ ಬರುತ್ತಿದ್ದಾಗ ಮುಂದೆ ಸಾಗುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಯತ್ನಿಸಿದ್ದು, ಆ ವೇಳೆ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕದ ಮೇಳೆ ಹತ್ತಿ ಬಳಿಕ ರಸ್ತೆಯಲ್ಲೇ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆ ಗರಗ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರೆಸಿದ್ದಾರೆ.

RELATED ARTICLES
spot_img

Latest News