Sunday, November 24, 2024
Homeರಾಜ್ಯಶೆಟ್ಟರ್‌ಗೆ ಟಿಕೆಟ್ ತಪ್ಪಿದರೇ ಉಗ್ರ ಹೋರಾಟ : ವೀರಶೈವ ಲಿಂಗಾಯತ ಮಹಾಸಭಾ ಎಚ್ಚರಿಕೆ

ಶೆಟ್ಟರ್‌ಗೆ ಟಿಕೆಟ್ ತಪ್ಪಿದರೇ ಉಗ್ರ ಹೋರಾಟ : ವೀರಶೈವ ಲಿಂಗಾಯತ ಮಹಾಸಭಾ ಎಚ್ಚರಿಕೆ

ಹುಬ್ಬಳ್ಳಿ,ಮಾ.19- ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಲೋಕಸಭಾ ಟಿಕೆಟ್ ತಪ್ಪಿಸುವ ಕುತಂತ್ರ ನಡೆದಿದೆ. ಒಂದು ವೇಳೆ ಬೆಳಗಾವಿ ಕ್ಷೇತ್ರದ ಟಿಕೆಟ್ ತಪ್ಪಿದ್ದೇ ಆದರೇ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಎಚ್ಚರಿಕೆ ನೀಡಿದೆ.

ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಮಹಾಸಭಾದ ಉಪಾಧ್ಯಕ್ಷ ಪ್ರೊ ವಿ.ಸಿ.ಸವಡಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಕ್ಷವನ್ನ ಕಟ್ಟಿ ಬೆಳೆಸಿದ್ದಾರೆ. ಈ ಹಿಂದೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸುವ ಹುನ್ನಾರ ನಡೆಯಿತು. ಧಾರವಾಡ, ಹಾವೇರಿ ಲೋಕಸಭಾ ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಎರಡೂ ಕ್ಷೇತ್ರಗಳಲ್ಲೂ ಅವರಿಗೆ ಟಿಕೆಟ್ ನೀಡಲಿಲ್ಲ ಎಂದರು.

ಈಗ ಅವರ ಹೆಸರು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಆದ್ರೆ ಶೆಟ್ಟರ್‍ಗೆ ಆಗದ ಕೆಲವರು ಕುತಂತ್ರ ಮಾಡಿ ವ್ಯವಸ್ಥಿತವಾಗಿ ಅವರಿಗೆ ಟಿಕೆಟ್ ತಪ್ಪಿಸುವ ಹುನ್ನಾರ ನಡೆದಿದೆ. ಬಿಜೆಪಿ ವರಿಷ್ಠರು ಅವರ ಕುತಂತ್ರಕ್ಕೆ ಒಳಗಾದಗೆ ಶೆಟ್ಟರ್‍ಗೆ ಟಿಕೆಟ್ ನೀಡಬೇಕು. ಟಿಕೆಟ್ ನೀಡದೆ ಹೋದ್ರೆ ಬೀದಿಗಿಳಿದು ಉಗ್ರವಾದ ಹೋರಾಟ ಮಾಡಿ, ಚುನಾವಣೆಯಲ್ಲಿ ನಮ್ಮ ಶಕ್ತಿ ತೋರಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಶೇಖರ ಕವಳಿ, ರಾಜಶೇಖರ ಉಪ್ಪಿನ, ಪರಮೇಶ್ವರ ನಿಗದಿ ಮುಂತಾದವರಿದ್ದರು.

ಶೆಟ್ಟರ್ ದೆಹಲಿಗೆ :
ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಟಿಕೇಟ್ ಆಕಾಂಕ್ಷಿಯಾಗಿರುವ ಶೆಟ್ಟರ್ ಈಗ ಮತ್ತೇ ವರಿಷ್ಠರ ಭೇಟಿಗೆ ದೆಹಲಿಗೆ ಹೋಗಿದ್ದಾರೆ. ಶೆಟ್ಟರ್ ಅವರೇ ಬೆಳಗಾವಿ ಅಭ್ಯರ್ಥಿ ಆಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಆದರೆ ನಾಯಕರೊಬ್ಬರ ನಿವಾಸದಲ್ಲಿ ಸಭೆ ನಡೆಸಿದ ವಿರೀ ಪಡೆ ನಾಯಕರು ಬೇರ ತಂತ್ರ ರೂಪಿಸಿದ್ದಾರೆ.

ಈ ನಡುವೆ ಕಾಟಾಚಾರಕ್ಕೆ ಬೆಳಗಾವಿಗೆ ಜಗದೀಶ ಶೆಟ್ಟರ್ ಹೆಸರು ಮುಂಚೂಣಿಯಲ್ಲಿದ್ದು, ರಾಷ್ಟ್ರೀಯ ನಾಯಕರ ತೀರ್ಮಾನವೇ ಅಂತಿಮ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ ಹೇಳಿದ್ದಾರೆ ಆದೆ ಇದ್ದಕ್ಕೆ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಬಿ.ಎಲ್ ಸಂತೋಷ ಬಣವಾದ ಪ್ರಭಾಕರ್ ಕೋರೆ, ಈರಣ್ಣ ಕಡಾಡಿ, ಮಹಾಂತೇಶ ಕವಟಿಗಿಮಠ ಸೇರಿದಂತೆ ಅನೇಕರು ವಿರೋಧ ವ್ಯಕ್ಕತಪಡಿಸಿದ್ದಾರೆ.

ಜಗದೀಶ್ ಶೆಟ್ಟರ್ ಅವರ ಬೀಗರಾದ ಹಾಲಿ ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಅವರನ್ನು ಬದಲಿಸಲು ಸಿದ್ಧತೆ ಆಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಮಿತಿ ಮೀರಿರುವ ಭಿನ್ನಮತವನ್ನು ಈ ಮೂಲಕ ನಿಯಂತ್ರಿಸಬಹುದುಧಾರವಾಡ ಸಹಿತ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೆಟ್ಟರ್ ಪ್ರಭಾವವಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಬಿಜೆಪಿ ಮತ ಚದುರದಂತೆ ನೋಡಿಕೊಳ್ಳುವುದು ಎನ್ನಲಾಗಿದೆ.

RELATED ARTICLES

Latest News