Homeರಾಜ್ಯ4744 ಸರ್ಕಾರಿ ಹುದ್ದೆ ನೇಮಕಕ್ಕೆ ಸದ್ಯದಲ್ಲೇ ಅಧಿಸೂಚನೆ

4744 ಸರ್ಕಾರಿ ಹುದ್ದೆ ನೇಮಕಕ್ಕೆ ಸದ್ಯದಲ್ಲೇ ಅಧಿಸೂಚನೆ

ಬೆಂಗಳೂರು, ಸೆ.2- ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪದವಿ ಹಾಗೂ ಪಿಯುಸಿ- ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಒಟ್ಟು 4,744 ಹುದ್ದೆಗಳ ನೇಮಕಾತಿಗೆ ಇದೇ ತಿಂಗಳಲ್ಲಿಯೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್‌.ಪ್ರಸನ್ನ ಅವರು ತಿಳಿಸಿದ್ದಾರೆ.

ಈ ಹುದ್ದೆಗಳಿಗೆ ನವೆಂಬರ್‌ ಹಾಗೂ ಡಿಸೆಂಬರ್‌ ತಿಂಗಳಲ್ಲಿ ಲಿಖಿತ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಯಾವ ಇಲಾಖೆಯ ಯಾವ ಹುದ್ದೆಗೆಳಿಗೆ ಅರ್ಜಿ ಸಲ್ಲಿಸಬಹುದು ಎಂಬುದರ ವಿವರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಪಠ್ಯಕ್ರಮದ ವಿವರಗಳನ್ನು ನೀಡಲಾಗಿದೆ. ಒಮೆ ನೋಡಿಕೊಂಡು ಅಧ್ಯಯನ ಆರಂಭಿಸಿ. ಪದವಿ ಮಟ್ಟದ ತಾಂತ್ರಿಕೇತರ ಹುದ್ದೆಗಳು 2,421 ಹಾಗೂ ಪಿಯುಸಿ ಮಟ್ಟದ ತಾಂತ್ರಿಕೇತರ ಹುದ್ದೆಗಳು 2,062 ಇವೆ. ತಾಂತ್ರಿಕ ಹುದ್ದೆಗಳು 261 ಇದ್ದು, ನಂತರದ ದಿನಗಳಲ್ಲಿ ಇನ್ನೂ ಹೊಸ ಇಲಾಖೆ ಮತ್ತು ಹುದ್ದೆಗಳು ಸೇರುವ ಸಾಧ್ಯತೆ ಇದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

RELATED ARTICLES
spot_img

Latest News