ಬೆಂಗಳೂರು,ಮಾ.19- ಬಿಜೆಪಿ ಹಾಗೂ ಜೆಡಿಎಸ್ ನಡುವೆ ಹೊಂದಾಣಿಕೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗದಂತೆ ರಾಷ್ಟ್ರೀಯ ನಾಯಕರು ಎಲ್ಲ ವನ್ನು ಬಗೆಹರಿಸುತ್ತಾರೆ ಎಂದು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಜೊತೆ ಮೈತ್ರಿಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ ಬೆನ್ನಲ್ಲೇ ವಿಜಯೇಂದ್ರ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,ಎರಡೂ ಪಕ್ಷಗಳ ನಡುವೆ ಸಣ್ಣಪುಟ್ಟ ಗೊಂದಲಗಳಿದ್ದರೆ ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಮಧ್ಯ ಪ್ರವೇಶ ಮಾಡಿ ಗೊಂದಲ ಬಗೆಹರಿಸುತ್ತಾರೆ. ಬಿಜೆಪಿ ಮತ್ತು ಜೆಡಿಎಸ್ ನಡುವೆ ಯಾವುದೇ ರೀತಿಯ ಗೊಂದಲ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಜೆಡಿಎಸ್ನವರಿಗೂ ಸಮಾಧಾನ ಆಗುವ ರೀತಿಯಲ್ಲಿ ನಮ್ಮ ರಾಷ್ಟ್ರೀಯ ನಾಯಕರು ಸಮರ್ಪಕ ತೀರ್ಮಾನ ಮಾಡುವ ವಿಶ್ವಾಸ ಇದೆ. ಚರ್ಚೆಯಿಂದ ವಿಷಯ ಬಗೆಹರಿಯಲಿದೆ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕಳೆದ ತಡರಾತ್ರಿ ರಾಷ್ಟ್ರೀಯ ನಾಯಕರ ಜೊತೆ ಚರ್ಚೆ ಮಾಡಲಾಗಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಟರಾದ ಹೆಚ್.ಡಿ.ದೇವೆಗೌಡರ ಜೊತೆಗೂ ರಾತ್ರಿ ಚರ್ಚೆ ನಡೆಸಲಾಗಿದೆ. ಇಂದು ಬೆಳಿಗ್ಗೆ ದೂರವಾಣಿ ಮೂಲಜ ಕುಮಾರಸ್ವಾಮಿಗೂ ಮಾಹಿತಿ ನೀಡಿದ್ದೇನೆ ಎಂದು ಹೇಳಿದರು.
ಯಾವ ಸಂದರ್ಭದಲ್ಲಿ ಏನೇನು ಮಾಡಬೇಕು ಎಂಬುದರ ಕುರಿತು ನಮ್ಮ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಏನೆ ಸಣ್ಣಪುಟ್ಟ ಗೊಂದಲಗಳಿದ್ದರೂ ಸುಖಾಂತ್ಯವಾಗುತ್ತೆದೆ ಎಂದರು.ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಬಹುತೇಕ ಯಶಸ್ವಿಯಾಗಿದೆ.ಒಂದು ವಾರಗಳ ಕಡಿಮೆ ಅವಧಿಯಲ್ಲಿ ಕಲಬುರಗಿ ಶಿವಮೊಗ್ಗ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿದೆ.ಅವರನಪ್ರಿಯತೆ ದಿನೇ ದಿನೆ ಎತ್ತರಕ್ಕೆ ಹೋಗುತ್ತಿದೆ.ಇದರಿಂದ ರಣಭೂಮಿಯಲ್ಲಿದ್ದ ಕಾರ್ಯಕರ್ತರಿಗೆ ಉತ್ಸಾಹ ಬಂದಿದೆ ಎಂದು ಮಚ್ಚುಗೆ ವ್ಯಕ್ತಪಡಿಸಿದರು.
ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡಗೆ ಕಾಂಗ್ರೆಸ್ ಗಾಳ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಬಿ.ವೈ.ವಿಜಯೇಂದ್ರ ಅವರು, ಕಳೆದ ಒಂದು ವಾರದ ಘಟನೆಗಳನ್ನ ಅವಲೋಕಿಸಲಾಗಿದೆ. ಕಾಂಗ್ರೆಸ್ ನಾಯಕರಿಗೆ ಅವರ ಮುಖಂಡರಿಗಿಂತ ಬಿಜೆಪಿ ನಾಯಕರ ಮೇಲೆ ಪ್ರೀತಿ ವಿಶ್ವಾಸ ಬಂದಿದೆ.ನನಗೆ ವಿಶ್ವಾಸ ಇದೆ ಎಲ್ಲವೂ ಸರಿ ಹೋಗುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಸದಾನಂದಗೌಡರು ನಮ್ಮ ಪಕ್ಷದಲ್ಲೇ ಉಳಿಯುತ್ತಾರೆ. ಇದೇ ರೀತಿ ನಮ್ಮ ಪಕ್ಷದ ಮತ್ತೊಬ್ಬ ಹಿರಿಯರಾದ ಕೆ.ಎಸ್.ಈಶ್ವರಪ್ಪಗೆ ಸತ್ಯ ಅರ್ಥಾವಾದ ಮೇಲೆ ಸರಿ ಹೋಗುತ್ತೆದೆ. ಜಗೀಶ್ ಶೆಟ್ಟರ್ ಸ್ಪರ್ಧೆ ಕುರಿತು ಬಹಿರಂಗ ಚರ್ಚೆ ಮಾಡುವುದಿಲ್ಲ. ಇಂದು ಮತ್ತು ನಾಳೆ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಎಲ್ಲವೂ ತೀರ್ಮಾನ ಆಗುತ್ತೆದೆ ಎಂದು ಹೇಳಿದರು.