ಬೆಂಗಳೂರು, ಸೆ.3- ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ನಾಳೆ ಪ್ರಾಣಿವಧೆ ಹಾಗೂ ಮಾಂಸ ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ.
ಜನ್ಮಾಷ್ಟಮಿ ಆಚರಣೆ ಹಿನ್ನೆಲೆಯಲ್ಲಿ ಜಿಬಿಎ ವ್ಯಾಪ್ತಿಯ ಎಲ್ಲ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ನಡೆಸುವುದನ್ನು ನಿಷೇಧಿಸಲಾಗಿದೆ. ಇದರ ಜತೆಗೆ ಮಾಂಸದ ಮಳಿಗೆಗಳಲ್ಲಿ ಮಾಂಸ ಮಾರಾಟಕ್ಕೂ ಅವಕಾಶ ಇರುವುದಿಲ್ಲ ಎಂದು ಪಶುಪಾಲನಾ ಇಲಾಖೆ ತಿಳಿಸಿದೆ.
ನಾಳೆ ಜಿಬಿಎ ವ್ಯಾಪ್ತಿಯಲ್ಲಿರುವ ಕಸಾಯಿಖಾನೆಗಳು ಹಾಗೂ ಮಾಂಸದ ಅಂಗಡಿಗಳು ವಹಿವಾಟು ಸ್ಥಗಿತಗೊಳಿಸಬೇಕಾಗುತ್ತದೆ. ಹಬ್ಬದ ಹಿನ್ನೆಲೆಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟಕ್ಕೆ ನಿರ್ಬಂಧ ವಿಧಿಸಿ ಜಿಬಿಎ ಈ ಕ್ರಮ ಕೈಗೊಂಡಿದೆ. ನಿಷೇಧದ ಆದೇಶವನ್ನು ಎಲ್ಲ ಸಂಬಂಧಪಟ್ಟ ಕಸಾಯಿಖಾನೆ ಹಾಗೂ ಮಾಂಸದ ಅಂಗಡಿ ಮಾಲೀಕರು ಪಾಲಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಆದೇಶ ಉಲ್ಲಂಘನೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.
