Homeರಾಜ್ಯಹನೂರು ಅರಣ್ಯದಲ್ಲಿ ಮತ್ತೆ ವನ್ಯಪ್ರಾಣಿ ಬೇಟೆ

ಹನೂರು ಅರಣ್ಯದಲ್ಲಿ ಮತ್ತೆ ವನ್ಯಪ್ರಾಣಿ ಬೇಟೆ

ಹನೂರು,ಸೆ.3- ಮಲೆಮಹದೇಶ್ವರ ವನ್ಯ ಜೀವಿಧಾಮದಲ್ಲಿ ಮತ್ತೆ ವನ್ಯಪ್ರಾಣಿ ಬೇಟೆ ಪ್ರಕರಣ ಬೆಳಕಿಗೆ ಬಂದಿದೆ. ಶಾಗ್ಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲು ಗುಡ್ಡದಲ್ಲಿ ಅರಣ್ಯ ಅಧಿಕಾರಿಗಳು ಮತ್ತು ಕಳ್ಳ ಬೇಟೆಗಾರರ ನಡುವೆ ನಡೆದ ಗುಂಡಿನ ಕಾಳಗದ ಸದ್ದು ಬೆಚ್ಚಿ ಬೀಳಿಸುವ ಘಟನೆ ಬೆನ್ನಲ್ಲೇ ಈ ಘಟನೆ ನಡೆದಿದೆ.

ತಾಲ್ಲೂಕಿನ ಅಜ್ಜೀಪುರ ಗ್ರಾಮದ ಹೊರ ವಲಯ ಉಡುತೊರೆ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ನೀರಿನ ದಾಹ ನೀಗಿಸಿಕೊಳ್ಳಲು ಕಾಡಿನಿಂದ ಬಂದಿದ್ದ ಕಡವೆ ಮೇಲೆ ಕಳ್ಳ ಬೇಟೆಗಾರರ ದುಷ್ಕರ್ಮಿಗಳ ತಂಡದ ಗುಂಪು ನಾಡ ಬಂದೂಕಿನಿಂದ ಗುಂಡು ಹಾರಿಸಿ ವನ್ಯ ಪ್ರಾಣಿಯನ್ನು ಬೇಟೆಯಾಡಿ ನಿರ್ದಾಕ್ಷಿಣ್ಯವಾಗಿ ಕೊಂದು ಹಾಕಿದ್ದಾರೆ.ನಂತರ ಅದನ್ನು ಮೂರು ಭಾಗಗಳಾಗಿ ಕತ್ತರಿಸಿ ಮೂರು ಚೀಲಗಳಲ್ಲಿ ತುಂಬಿಕೊಂಡು ತಲೆ ಮೇಲೆ ಹೊತ್ತು ಸಾಗಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಕಂಡು ಆರೋಪಿಗಳು ಕಡವೆ ಮಾಂಸದ ಚೀಲಗಳನ್ನು ಸ್ಥಳದಲ್ಲೇ ಬಿಟ್ಟು ದಟ್ಟಾರಣ್ಯದಲ್ಲಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಬಫರ್‌ ವಲಯದ ವಲಯ ಅರಣ್ಯಾಧಿಕಾರಿ ಮಹೇಶ್‌ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ಬೇಟೆಗಾರರ ಪತ್ತೆಗೆ ಬಲೆ ಬೀಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಶ್ವಾನದಳ ತಂಡದಿಂದ ಕೋಬಿಂಗ್‌ ನಡೆಸಲಾಗಿರುತ್ತದೆ. ಮತ್ತು ತನಿಖಾ ತಂಡದಿಂದ ಕಾರ್ಯವು ಪ್ರಗತಿಯಲ್ಲಿರುತ್ತದೆ.ಕಾರ್ಯಾಚರಣೆಯನ್ನು ಪ್ರಭಾರ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿರಾಜ್‌ ಶ್ರೀಕಾಂತ್‌ ಹೊಸೂರು ರವರ ಮಾರ್ಗದರ್ಶನದಂತೆ ವಲಯ ಅರಣ್ಯಾಧಿಕಾರಿ ಮಹೇಶ ಹೆಚ್‌.ಎನ್‌ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ನಂದೀಶ್‌ ಎಸ್‌‍.ಬಿ ಮತ್ತು ಇತರ ಸಿಬ್ಬಂದಿಗಳ ತಂಡ ದಾಳಿಯಲ್ಲಿ ಪಾಲ್ಗೊಂಡಿದ್ದರು.

RELATED ARTICLES
spot_img

Latest News