ಬೆಂಗಳೂರು, ಸೆ.4- ಇಬ್ಬರು ಐಎಎಸ್ ಹಾಗೂ ಒಬ್ಬರು ಐಎಫ್ಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಹಾರ ಗುಣಮಟ್ಟ ಮತ್ತು ಆಹಾರ ಸುರಕ್ಷತಾ ಪ್ರಾಧಿಕಾರದ ಆಯುಕ್ತ ಶ್ರೀನಿವಾಸ್ ಕೆ. (ಐಎಎಸ್) ಅವರಿಗೆ ಕರ್ನಾಟಕ ರಾಜ್ಯ ಔಷಧ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ಬೆಂಗಳೂರು ವಿದ್ಯುತ್ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ. ಶಿವಶಂಕರ ಎನ್. (ಐಎಎಸ್) ಅವರಿಗೆ ಕರ್ನಾಟಕ ವಿದ್ಯುತ್ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
ಪಶುಸಂಗೋಪನೆ ಇಲಾಖೆಯ ಆಯುಕ್ತ ಲಿಂಗರಾಜು ಎಸ್.ಎಸ್. (ಐಎಫ್ಎಸ್) ಅವರಿಗೆ ರೇಷ್ಮೆ ಇಲಾಖೆಯ ಆಯುಕ್ತರ ಹುದ್ದೆ ಹಾಗೂ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
