Homeರಾಜ್ಯರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿ ಜಿ.ಟಿ.ದೇವೇಗೌಡ ಅವಿರೋಧ ಆಯ್ಕೆ

ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿ ಜಿ.ಟಿ.ದೇವೇಗೌಡ ಅವಿರೋಧ ಆಯ್ಕೆ

ಬೆಂಗಳೂರು, ಸೆ.4- ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿ ಶಾಸಕ ಜಿ.ಟಿ. ದೇವೇಗೌಡ ಅವರು ಮರು ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಜಿ.ಟಿ. ದೇವೇಗೌಡ ಅವರು ಅಧ್ಯಕ್ಷರಾಗಿ ಹಾಗೂ ಬಿ.ಕೆ. ಶಿವಕುಮಾರ್‌ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಿ.ಟಿ. ದೇವೇಗೌಡ ಅವರು ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿ ಸತತ 7ನೇ ಬಾರಿಗೆ ಆಯ್ಕೆಯಾಗಿದ್ದಾರೆ. ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್‌. ನವೀನ್‌ ತಿಳಿಸಿದ್ದಾರೆ.

ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ಜಿ.ಟಿ. ದೇವೇಗೌಡ ಸೇರಿದಂತೆ ಮಹಾಮಂಡಳದ ಎಲ್ಲ ನಿರ್ದೇಶಕರು ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ನಿವಾಸಕ್ಕೆ ತೆರಳಿ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದರು.

RELATED ARTICLES
spot_img

Latest News