ಬೆಂಗಳೂರು, ಮಾ.21 – ನಗರದ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಇಂದು ಮಧ್ಯಾಹ್ನ ನ್ಯಾಷನಲ್ ಲಾ ಕಾಲೇಜಿನ ವಿದ್ಯಾರ್ಥಿ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಿಣಾಮ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಿಂದ 8 ಅಡಿ ದೂರದಲ್ಲಿ ವಿದ್ಯಾರ್ಥಿಯ ಮೃತ ದೇಹ ಎರಡು ತುಂಡಾಗಿ ಸಿಕ್ಕಿದೆ. ಮುಂಬೈ ಮೂಲದ ಧ್ರುವ್ ಟಕ್ಕರ್ (19 ವರ್ಷ) ಆತ್ಯಹತ್ಯೆ ಮಾಡಿಕೊಂಡಿರುವ ನಗರದ ನ್ಯಾಷನಲ್ ಲಾ ಕಾಲೇಜಿನ ವಿದ್ಯಾರ್ಥಿ.
ವಿದ್ಯಾರ್ಥಿಯ ಆತ್ಮಹತ್ಯೆಗೆ ಸದ್ಯಕ್ಕೆ ಕಾರಣ ತಿಳಿದುಬಂದಿಲ್ಲ. ಸುದ್ದಿ ತಿಳಿದ ಚಂದ್ರ ಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಘಟನೆಯ ಸಂದರ್ಭದಲ್ಲಿ ಕೆಲ ಕಾಲ ಮಾಗಡಿ ರಸ್ತೆಯಿಂದ ಛಲಘಟ್ಟ ಮಾರ್ಗದ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಿದ್ದು, ಈಗ ಎಂದಿನಂತೆ ಸಂಚಾರ ಆರಂಭಗೊಂಡಿದೆ.