Homeಜಿಲ್ಲಾ ಸುದ್ದಿಗಳುಮಕ್ಕಳೊಂದಿಗೆ ಅನುಚಿತ ವರ್ತನೆ ತೋರಿದ ಶಿಕ್ಷಕ ಪೋಕ್ಸೋ ಕಾಯ್ದೆಯಡಿ ಅರೆಸ್ಟ್

ಮಕ್ಕಳೊಂದಿಗೆ ಅನುಚಿತ ವರ್ತನೆ ತೋರಿದ ಶಿಕ್ಷಕ ಪೋಕ್ಸೋ ಕಾಯ್ದೆಯಡಿ ಅರೆಸ್ಟ್

ಮೈಸೂರು, ಸೆ.26-ಶಾಲಾ ಮಕ್ಕಳೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಹಿನ್ನೆಲೆಯಲ್ಲಿ ತಾಲೂಕಿನ ಶಾಲೆಯೊಂದರ ಶಿಕ್ಷಕನನ್ನು ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.ರಾಮಶೆಟ್ಟಿ (59) ಬಂಧಿತ ಶಿಕ್ಷಕ. ಈತ ಕಳೆದ ಮೂರು ವರ್ಷಗಳಿಂದ ಈ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ನಿವತ್ತಿಯ ಅಂಚಿನಲ್ಲಿದ್ದರು ಎಂದು ತಿಳಿದುಬಂದಿದೆ.

ಶಿಕ್ಷಕ ರಾಮಶೆಟ್ಟಿ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ವಿದ್ಯಾರ್ಥಿಗಳು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೋಷಕರು ಶಿಕ್ಷಣ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು, ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

ದೂರು ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣಾ ಘಟಕದ ಸದಸ್ಯರು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದಿದ್ದಾರೆ. ಈ ವೇಳೆ ಪ್ರಭಾರಿ ಬಿಇಒ ಅನಂತರಾಜು ಕೂಡ ಉಪಸ್ಥಿತರಿದ್ದರು.ಮಕ್ಕಳ ಹೇಳಿಕೆ ಮತ್ತು ಪ್ರಾಥಮಿಕ ಮಾಹಿತಿ ಆಧಾರದ ಮೇಲೆ ಪೊಲೀಸರಿಗೆ ದೂರು ನೀಡಲಾಗಿದ್ದು, ದೂರಿನ ಅನ್ವಯ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.

ಪೋಕ್ಸೋ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಆರೋಪಿ ಶಿಕ್ಷಕನನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.ನಿವತ್ತಿಗೆ ಕೆಲವೇ ತಿಂಗಳು ಬಾಕಿ ಇರುವಾಗ ಶಿಕ್ಷಕನ ವಿರುದ್ಧ ಇಂತಹ ಗಂಭೀರ ಆರೋಪ ಕೇಳಿಬಂದಿರುವುದು ಶಾಲಾ ವಲಯದಲ್ಲಿ ಆತಂಕ ಮೂಡಿಸಿದೆ.

RELATED ARTICLES
spot_img

Latest News