Homeರಾಜ್ಯಜ್ಞಾನೇಶ್‌ ಕುಮಾರ್‌ ಬಂಧಿಸಿ ಕಠಿಣಕ್ರಮ ಕೈಗೊಳ್ಳುವಂತೆ ಸಿದ್ದರಾಮಯ್ಯ ಆಗ್ರಹ

ಜ್ಞಾನೇಶ್‌ ಕುಮಾರ್‌ ಬಂಧಿಸಿ ಕಠಿಣಕ್ರಮ ಕೈಗೊಳ್ಳುವಂತೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು, ಸೆ.26- ಕೇಂದ್ರ ಚುನಾವಣಾ ಅಯುಕ್ತ ಜ್ಞಾನೇಶ್‌ ಕುಮಾರ್‌ ಅವರನ್ನು ಹುದ್ದೆಯಿಂದ ವಜಾಗೊಳಿಸಿ ಕೂಡಲೇ ಬಂಧಿಸಿ ಕಠಿಣಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ನಗರದ ಫ್ರೀಡಂಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಜ್ಞಾನೇಶ್‌ ಕುಮಾರ್‌ ಅವರನ್ನು ವಜಾ ಗೊಳಿಸಲು ರಾಷ್ಟ್ರಪತಿಯವರು ತಕ್ಷಣ ಕ್ರಮ ಕೈಗೊಳ್ಳಬೇಕು ಮತ್ತು ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ವಿಚಾರಣೆ ನಡೆಸಲು ಕೇಂದ್ರ ಸರ್ಕಾರಕ್ಕೆ ಆದೇಶ ನೀಡಬೇಕೆಂದು ಒತ್ತಾಯಿಸಿದರು.

ನಿಷ್ಪಕ್ಷಪಾತವಾಗಿ ಚುನಾವಣೆ ನಡೆಯದೇ ಇದ್ದರೆ, ಪ್ರಜಾಪ್ರಭುತ್ವಕ್ಕೆ ಅಪಾಯವಾಗಲಿದೆ. ಇತ್ತೀಚಿನ ದಿನಗಳಲ್ಲಿ ಬಿಜೆಪಿ ಚುನಾವಣಾ ಆಯೋಗವನ್ನು ಖರೀದಿಸಿ ಅಥವಾ ದುರುಪಯೋಗ ಪಡಿಸಿಕೊಂಡು ಚುನಾವಣೆಯನ್ನು ಗೆಲ್ಲುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಮತಗಳ್ಳತನ ಮಾಡಿ ಅಥವಾ ಆಯೋಗವನ್ನು ದುರುಪಯೋಗಪಡಿಸಿಕೊಂಡು ಅಧಿಕಾರ ಹಿಡಿದಿದ್ದಾರೆ. ಅವರದು ನ್ಯಾಯಯುತವಾದ ಗೆಲುವಲ್ಲ, ಹಿಂಬಾಗಿಲ ಮೂಲಕ ಪ್ರಧಾನಿಯಾದ ಮೋದಿಯವರಿಗೆ ಹುದ್ದೆಯಲ್ಲಿ ಮುಂದುವರೆಯಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಆಗ್ರಹಿಸಿದರು.

75 ವರ್ಷ ದಾಟಿದವರು ಅಧಿಕಾರದಲ್ಲಿ ಮುಂದುವರೆಯುವಂತಿಲ್ಲ ಎಂದು ಬಿಜೆಪಿಯಲ್ಲಿ ಬಹುತೇಕರನ್ನು ಅಧಿಕಾರದಿಂದ ಕೆಳಗಿಳಿಸಲಾಗಿದೆ. ಆದರೆ ನರೇಂದ್ರ ಮೋದಿಯವರು 75 ವರ್ಷ ದಾಟಿದರೂ ಇನ್ನೂ ಪ್ರಧಾನಿ ಹುದ್ದೆಯಲ್ಲಿ ಮುಂದುವರೆದಿದ್ದಾರೆ. ಇವರೊಬ್ಬರಿಗೆ ವಿನಾಯಿತಿ ಏಕೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಮಾತನಾಡಿ, ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಚುನಾವಣಾ ವ್ಯವಸ್ಥೆ ಹಾಳಾಗುತ್ತಿದೆ ಎಂದು ಆರೋಪಿಸಿದರು. ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದೆ ಎಂದು ದೂರಿದರು.ಚುನಾವಣಾ ಆಯೋಗ ಮತದಾರರ ಪಟ್ಟಿಯಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡಬಾರದು.

ಮತದಾರರ ಪಟ್ಟಿಗೆ ಸಂಬಂಧಿಸಿದ ಅಧಿಕಾರಗಳು ಜಿಲ್ಲಾಧಿಕಾರಿಗಳ ವ್ಯಾಪ್ತಿಯಲ್ಲಿರಬೇಕು ಎಂದು ಮೊಯ್ಲಿ ಹೇಳಿದರು. ಕೋಟ್ಯಂತರ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಆರೋಪಿಸಿದ ಅವರು, ಇದರಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ಉಂಟಾಗಿದೆ ಎಂದರು.

ಮುಖ್ಯ ಚುನಾವಣಾ ಆಯುಕ್ತರು ಸರ್ವಾಧಿಕಾರಿ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ ಮೊಯ್ಲಿ, ತಮಗೆ ಬೇಕಾದ ಪಕ್ಷವನ್ನು ಅಧಿಕಾರಕ್ಕೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು. ಚುನಾವಣಾ ಕಾನೂನುಗಳಲ್ಲಿ ಅಗತ್ಯ ಬದಲಾವಣೆಗಳನ್ನು ತರಬೇಕು ಎಂದು ಹೇಳಿದರು.

ಮಾಜಿ ಸಚಿವ ದಿನೇಶ್‌ ಗುಂಡೂರಾವ್‌ ಮಾತನಾಡಿ, ದೇಶದ ಚುನಾವಣಾ ವ್ಯವಸ್ಥೆ ಹಿಂದೆ ಪಾರದರ್ಶಕವಾಗಿತ್ತು. ಚುನಾವಣಾ ಆಯೋಗ ಸ್ವಾಯತ್ತವಾಗಿ ಕಾರ್ಯನಿರ್ವಹಿಸುತ್ತಿದ್ದ ಕಾರಣ ಜಗತ್ತಿನಾದ್ಯಂತ ಭಾರತದ ಚುನಾವಣಾ ವ್ಯವಸ್ಥೆಗೆ ಉತ್ತಮ ಹೆಸರು ಇತ್ತು. ಆದರೆ ಇಂದು ಚುನಾವಣಾ ಆಯೋಗದ ಕಾರ್ಯವೈಖರಿ ಬಗ್ಗೆ ಪ್ರಶ್ನೆಗಳು ಮೂಡಿವೆ ಎಂದು ಹೇಳಿದರು.

ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಕುರಿತು ರಾಹುಲ್‌ ಗಾಂಧಿ ಧ್ವನಿ ಎತ್ತಿದ್ದರು. ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲೂ ಅವರು ಪ್ರಶ್ನೆಗಳನ್ನು ಎತ್ತಿದ್ದರು. ಆದರೆ ಈ ವಿಚಾರಗಳಿಗೆ ಅಗತ್ಯ ಗಮನ ದೊರೆಯಲಿಲ್ಲ ಎಂದು ದಿನೇಶ್‌ ಗುಂಡೂರಾವ್‌ ಹೇಳಿದರು. ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಆರಂಭಿಸಲಾಯಿತು. ಪಶ್ಚಿಮ ಬಂಗಾಳದಲ್ಲೂ ಇದೇ ರೀತಿಯ ಪ್ರಕ್ರಿಯೆ ಆರಂಭಿಸಲಾಗಿದೆ. ಚುನಾವಣೆ ಸಮೀಪದಲ್ಲೇ ಇಂತಹ ಕ್ರಮ ಕೈಗೊಳ್ಳುವ ಅಗತ್ಯವೇನು ಎಂದು ಅವರು ಪ್ರಶ್ನಿಸಿದರು.

ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಲಕ್ಷಾಂತರ ಅರ್ಜಿಗಳು ನ್ಯಾಯಮಂಡಳಿಗಳ ಮುಂದೆ ಬಾಕಿ ಉಳಿದಿವೆ. ಆದರೆ ಅವರಿಗೆ ಇನ್ನೂ ನ್ಯಾಯ ದೊರೆತಿಲ್ಲ ಎಂದು ದಿನೇಶ್‌ ಗುಂಡೂರಾವ್‌ ಹೇಳಿದರು.

ಪ್ರಧಾನಿ ಸೇರಿದಂತೆ ಕೆಲವರು ಏನೇ ಮಾತನಾಡಿದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದಿಲ್ಲ. ಆದರೆ ಇತರರು ಇದೇ ರೀತಿಯ ಹೇಳಿಕೆ ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಪಿಸಿದ ಅವರು, ಚುನಾವಣಾ ಆಯೋಗದ ಕಾರ್ಯವೈಖರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಸಚಿವೆ ರಾಣಿ ಸತೀಶ್‌, ವಿಧಾನ ಪರಿಷತ್‌ ಹಾಗೂ ವಿಧಾನಸಭೆಯ ಸದಸ್ಯರು ಭಾಗವಹಿಸಿದ್ದರು. ಎಲ್ಲರೂ ತೋಳಿಗೆ ಕಪ್ಪುಪಟ್ಟಿ ಧರಿಸಿ, ಪ್ಲೇ ಕಾರ್ಡ್‌ ಹಿಡಿದು ಘೋಷಣೆ ಕೂಗಿದರು.

RELATED ARTICLES
spot_img

Latest News