Friday, November 22, 2024
Homeರಾಷ್ಟ್ರೀಯ | Nationalರಷ್ಯಾ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ

ರಷ್ಯಾ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ

ನವದೆಹಲಿ,ಆ.23- ರಷ್ಯಾ ರಾಜಧಾನಿ ಮಾಸ್ಕೋದ ಕ್ರೋಕಸ್ ಕನ್ಸರ್ಟ್ ಹಾಲ್‍ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ನರೇಂದ್ರಮೋದಿ ಖಂಡಿಸಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಮಾತನಾಡಿರುವ ಅವರು ಮಾಸ್ಕೋದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇವೆ.

ಸಂತ್ರಸ್ತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಈ ದುಃಖದ ಸಮಯದಲ್ಲಿ ಭಾರತವು ರಷ್ಯಾದ ಒಕ್ಕೂಟದ ಸರ್ಕಾರ ಮತ್ತು ಜನರೊಂದಿಗೆ ಒಗ್ಗಟ್ಟಿನಿಂದ ನಿಂತಿದೆ ಎಂದು ಹೇಳಿದ್ದಾರೆ.ಇತ್ತ ದಾಳಿಗೆ ಸಂಬಂಧಪಟ್ಟಂತೆ ರಷ್ಯಾ ಅಧ್ಯಕ್ಷ ಪುಟಿನ್, ದಾಳಿಕೋರರು ತಕ್ಕ ಬೆಲೆ ತೆರಬೇಕಾಗುತ್ತದೆ. ಭಯೋತ್ಪಾದಕರನ್ನು ನಾವು ಸುಮ್ಮನೆ ಬಿಡಲ್ಲ ಎಂದು ದಾಳಿಯ ಹೊಣೆ ಹೊತ್ತ ಐಸಿಸ್‍ಗೆ ಎಚ್ಚರಿಕೆ ನೀಡಿದ್ದಾರೆ.

ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಸಂತ್ರಸ್ತರ ಕುಟುಂಬಗಳೊಂದಿಗೆ ಇವೆ. ಈ ದುಃಖದ ಸಮಯದಲ್ಲಿ ಭಾರತವು ರಷ್ಯಾದ ಒಕ್ಕೂಟದ ಸರ್ಕಾರ ಮತ್ತು ಜನರೊಂದಿಗೆ ಒಗ್ಗಟ್ಟಿನಿಂದ ನಿಂತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಶುಕ್ರವಾರ ಮಧ್ಯರಾತ್ರಿ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ನಡೆದ ಈ ಭೀಕರ ಭಯೋತ್ಪಾದಕ ದಾಳಿಯಲ್ಲಿ ಈವರೆಗೆ ಕನಿಷ್ಠ 70 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಮತ್ತು 140 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

RELATED ARTICLES

Latest News