Friday, November 22, 2024
Homeರಾಷ್ಟ್ರೀಯ | Nationalವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ಡೌಟ್..?

ವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ಡೌಟ್..?

ಲಖ್ನೋ,ಮಾ.24- ಸ್ವಪಕ್ಷೀಯರ ವಿರುದ್ಧವೇ ಆಗಾಗ್ಗೆ ಗುಡುಗುತ್ತಿದ್ದ ಗಾಂಧಿ ಕುಟುಂಬದ ಕುಡಿ ಹಾಗೂ ಕೇಂದ್ರದ ಮಾಜಿ ಸಚಿವೆ ಮನೇಕಾ ಗಾಂಧಿ ಪುತ್ರ ವರುಣ್ ಗಾಂಧಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ. ಉತ್ತರಪ್ರದೇಶದ ಫಿಲಿಬಿಟ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಸುತ್ತಿದ್ದ ವರುಣ್ ಗಾಂಧಿ ಹೆಸರನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಘೋಷಣೆ ಮಾಡಿರುವ ಪಟ್ಟಿಯಲ್ಲಿ ಅವರ ಹೆಸರನ್ನು ಬಿಡುಗಡೆ ಮಾಡಿಲ್ಲ.

ಮೂಲಗಳ ಪ್ರಕಾರ ಈ ಬಾರಿ ವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆಗಳು ಕ್ಷೀಣಿಸಿದ್ದು ಹೊಸ ಮುಖಕ್ಕೆ ಈ ಕ್ಷೇತ್ರದಿಂದ ಟಿಕೆಟ್ ನೀಡಲು ಪಕ್ಷ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

ಇನ್ನೊಂದು ಮೂಲಗಳ ಪ್ರಕಾರ ವರುಣ್ ಗಾಂಧಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದ್ದು ಇದೇ ಕ್ಷೇತ್ರದಿಂದ ಕೈ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಗೆದ್ದಿದ್ದ ವರುಣ್ ಗಾಂಧಿ ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದರು. ನಂತರ ಅವರು ಸರ್ಕಾರದ ಕೆಲವು ತೀರ್ಮಾನಗಳ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿ ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರ ಸೃಷ್ಟಿಸುತ್ತಿದ್ದರು.

ಕಾಂಗ್ರೆಸ್ ಸೇರಲು ಒಂದು ಹೆಜ್ಜೆ ಮುಂದಿಟ್ಟಿರುವ ವರುಣ್ ಗಾಂಧಿಗೆ ಫಿಲಿಪಿಟ್ ಕ್ಷೇತ್ರದಿಂದ ಟಿಕೆಟ್ ನೀಡದೆ ಸ್ಥಳೀಯ ಅಭ್ಯರ್ಥಿಗೆ ಮಣೆ ಹಾಕಲು ಬಿಜೆಪಿ ಮುಂದಾಗಿದೆ. ಈ ಹಿಂದೆ ವರುಣ್ ಗಾಂಧಿ ಅವರ ತಾಯಿ ಮನೇಕಾ ಗಾಂಧಿ ಬಿಜೆಪಿಯಿಂದ ಗೆದ್ದು 2014ರಲ್ಲಿ ಕೇಂದ್ರದ ಸಚಿವರಾಗಿದ್ದರು. ಆ ನಂತರ ಅವರಿಗೆ ಟಿಕೆಟ್ ನಿರಾಕರಿಸಲಾಗಿತ್ತು.

RELATED ARTICLES

Latest News