Homeರಾಜ್ಯದೆಹಲಿಗೆ ಬನ್ನಿ ಮುಕ್ತ ಚರ್ಚೆ ನಡೆಸೋಣ : ಕರ್ನಾಟಕದ ಕಬ್ಬು ಬೆಳೆಗಾರರಿಗೆ ಸಚಿವ ಜೋಶಿ ಸಲಹೆ

ದೆಹಲಿಗೆ ಬನ್ನಿ ಮುಕ್ತ ಚರ್ಚೆ ನಡೆಸೋಣ : ಕರ್ನಾಟಕದ ಕಬ್ಬು ಬೆಳೆಗಾರರಿಗೆ ಸಚಿವ ಜೋಶಿ ಸಲಹೆ

ನವದೆಹಲಿ,ಸೆ.29- ರೈತರ ಹಿತಾಸಕ್ತಿ ಕಾಪಾಡುವುದೇ ನಮ ಸರ್ಕಾರದ ಪ್ರಮುಖ ಆದ್ಯತೆ. ಕಬ್ಬು ಬೆಳೆಗಾರರ ಹಿತಾಸಕ್ತಿಗಾಗಿ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಸರ್ಕಾರ ಹಲವು ಪರಿಣಾಮಕಾರಿ ಬದಲಾವಣೆಗಳನ್ನು ತಂದಿದೆ. ಇದೀಗ ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಿ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ನಮ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ರೈತರಿಗೆ ಭರವಸೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಪ್ರತಿಭಟನೆಗೆ ಮುಂದಾಗಿರುವ ಕರ್ನಾಟಕದ ಕಬ್ಬು ಬೆಳೆಗಾರರಿಗೆ ಈ ಕರೆ ನೀಡಿರುವ ಅವರು, ಕರ್ನಾಟಕದ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಬೇಕಿಲ್ಲ. ದೆಹಲಿಗೆ ಬಂದರೆ ಅಧಿಕಾರಿಗಳ ಜತೆ ಮಾತುಕತೆ ನಡೆಸಿ ಸಮಸ್ಯೆಗೆ ಸ್ಪಂದಿಸುವುದಾಗಿ ಎಕ್‌್ಸನಲ್ಲಿ ಪೋಸ್ಟ್‌ ಮಾಡುವ ಮೂಲಕ ಭರವಸೆ ನೀಡಿದ್ದಾರೆ.

ಈ ಬಾರಿಯೂ ಬೆಲೆ ಹೆಚ್ಚಳ ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಪ್ರತಿ ವರ್ಷ ಎಫ್‌ಆರ್‌ಪಿಯನ್ನು ಹೆಚ್ಚಿಸುತ್ತಿದೆ. ಮೇ ತಿಂಗಳಲ್ಲಷ್ಟೇ ರೂ. 365ಕ್ಕೆ ಹೆಚ್ಚಿಸಿ ಕಬ್ಬು ಬೆಳೆಗಾರರಿಗೆ ನೆರವಾಗಿದೆ. ಈ ಬಾರಿಯೂ ಕಬ್ಬಿಗೆ ಸೂಕ್ತ ಬೆಲೆ ನೀಡಲಾಗುವುದು? ಎಂದು ರೈತರಿಗೆ ಸಂದೇಶ ರವಾನಿಸಿದ್ದಾರೆ.

2026ರ ಫೆಬ್ರವರಿ ತಿಂಗಳಲ್ಲಿ ಕಾರ್ಯಕ್ರಮವೊಂದಕ್ಕೆ ಹೊರಟಿದ್ದ ವಳೆ ರೈತ ಮುಖಂಡರು ತಮನ್ನು ಭೇಟಿಯಾಗಿ ಕಬ್ಬಿನ ಎಫ್‌ಆರ್‌ಪಿ ಬೆಲೆ ಹೆಚ್ಚಳಕ್ಕೆ ಮನವಿ ಮಾಡಿದ್ದರು. ಅಂತೆಯೇ ಕೇಂದ್ರ ಸರ್ಕಾರ ಮೇ ತಿಂಗಳಲ್ಲಷ್ಟೇ 365ಕ್ಕೆ ಹೆಚ್ಚಿಸಿದೆ. ಆ ಬಳಿಕ ರೈತರು ಯಾರೂ ತನ್ನನ್ನು ಭೇಟಿ ಮಾಡಿಲ್ಲ. ಪ್ರತಿಭಟನೆ ನಡೆಸುವ ಅವಶ್ಯಕತೆಯಿಲ್ಲ. ರೈತರ ಸಮಸ್ಯೆಗೆ ಸ್ಪಂದಿಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ.

ಕಬ್ಬಿನ ಎಫ್‌ಆರ್‌ಪಿ ದರ ಹೆಚ್ಚಳ ನಿರ್ಧಾರವನ್ನು ಬೆಲೆ ನಿಗದಿ ಸಮಿತಿ ಹಾಗೂ ರಾಜ್ಯ ಸರ್ಕಾರದ ಕಬ್ಬು ಆಯುಕ್ತರ ವರದಿ ಮತ್ತು ಶಿಫಾರಸುಗಳನ್ನು ಪರಿಗಣಿಸಿಯೇ ತೆಗೆದುಕೊಳ್ಳಲಾಗುತ್ತದೆ. ರೈತರಲ್ಲಿ ಯಾವುದೇ ಅನ್ಯ ಭಾವನೆ ಬೇಡ. ಬೀದಿಯಲ್ಲಿ ಪ್ರತಿಭಟನೆ ನಡೆಸುವ ಔಚಿತ್ಯವೂ ಇಲ್ಲ. ನೇರವಾಗಿ ದೆಹಲಿಗೆ ಧಾವಿಸಿದರೆ ಸಂಬಂಧಿತ ಅಧಿಕಾರಿಗಳ ಜತೆ ಚರ್ಚಿಸಿ ಸೂಕ್ತ ಬೆಲೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು. ರೈತರ ಅಹವಾಲುಗಳನ್ನು ಅತ್ಯಂತ ವಿನಮ್ರವಾಗಿ ಆಲಿಸಿ ಸೂಕ್ತ ಪರಿಹಾರಗಳನ್ನು ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಆದ್ದರಿಂದ ಸರ್ಕಾರದೊಂದಿಗೆ ಚರ್ಚೆಗೆ ಬನ್ನಿ ಎಂದು ಮತ್ತೊಮೆ ಅವರು ಮನವಿ ಮಾಡಿದ್ದಾರೆ

RELATED ARTICLES
spot_img

Latest News