ಬೆಂಗಳೂರು,ಮಾ.25- ಅತಿವೇಗದಲ್ಲಿ ಬರುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಮೆಟ್ರೊ ಪಿಲ್ಲರ್ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟಿರುವ ಘಟನೆ ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.
ಮಧ್ಯಪ್ರದೇಶ ಮೂಲದ ಲಾರಿ ಚಾಲಕ ಸೈಯದ್ ಖಾನ್(40) ಮೃತಪಟ್ಟವರು. ಲಾರಿಯಲ್ಲಿ ಕಬ್ಬಿಣವನ್ನು ಲೋಡ್ ಮಾಡಿಕೊಂಡು ಬರುತ್ತಿದ್ದಾಗ ರಾತ್ರಿ 9.15ರ ಸುಮಾರಿನಲ್ಲಿ ಸೀಪರ್ ಪೋರ್ಟ್ ರಸ್ತೆ, ಮೀನಕುಂಟೆ ಹೊಸೂರು ಬಳಿ ಅತಿವೇಗ, ಅಜಾಗರೂಕತೆಯಿಂದಾಗಿ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್ಗೆ ಲಾರಿ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ಲಾರಿ ಮುಂಭಾಗ ನಜ್ಜುಗಜ್ಜಾಗಿ ಚಾಲಕ ಮೃತಪಟ್ಟಿದ್ದಾರೆ. ಕ್ಲೀನರ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದು ಚಿಕ್ಕಜಾಲ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.