Homeರಾಜ್ಯರಾಜಮನೆತನಕ್ಕೆ ದಸರಾ ಮಹೋತ್ಸವದ ಅಧಿಕೃತ ಆಹ್ವಾನ

ರಾಜಮನೆತನಕ್ಕೆ ದಸರಾ ಮಹೋತ್ಸವದ ಅಧಿಕೃತ ಆಹ್ವಾನ

ಮೈಸೂರು,ಅ.3- ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರು ಅರಮನೆಯಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆಯರ್‌ ಅವರನ್ನು ಭೇಟಿಯಾಗಿ ದಸರಾ ಮಹೋತ್ಸವಕ್ಕೆ ಅಧಿಕೃತವಾಗಿ ಆಹ್ವಾನ ನೀಡಿದರು.

ಈ ವೇಳೆ ಸಚಿವರು ಮಾತನಾಡಿ, ಪ್ರತೀ ವರ್ಷದಂತೆ ಈ ಬಾರಿಯೂ ರಾಜಮನೆತನಕ್ಕೆ ಗೌರವಪೂರ್ವಕವಾಗಿ ಆಹ್ವಾನ ಪತ್ರಿಕೆ ನೀಡಲಾಗಿದೆ. ರಾಜಮನೆತನದವರು ದಸರಾ ಆಚರಣೆಗೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದಾರೆ.

ಕಳೆದ ಬಾರಿ ಅಂಬಾರಿ ಕಟ್ಟುವ ವೇಳೆ ಜನಸಂದಣಿಯಿಂದ ವಿಳಂಬವಾಗಿತ್ತು. ಈ ಬಾರಿ ಕಡಿಮೆ ಜನರಿಗೆ ಅವಕಾಶ ನೀಡುವಂತೆ ರಾಜಮನೆತನದವರು ಸಲಹೆ ನೀಡಿದ್ದಾರೆ.ಈ ಸಂದರ್ಭದಲ್ಲಿ ಶಾಸಕ ಶ್ರೀವತ್ಸ, ಗ್ಯಾರಂಟಿ ಯೋಜನೆ ಸಮಿತಿ ಉಪಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್‌, ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ, ಜಿ.ಪಂ. ಸಿಇಒ ಯುಕೇಶ್‌ ಕುಮಾರ್‌, ನಗರ ಪೊಲೀಸ್‌‍ ಆಯುಕ್ತರಾದ ಸೀಮಾ ಲಟ್ಕರ್‌, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯುಬ್‌ಖಾನ್‌ ಇದ್ದರು.

RELATED ARTICLES
spot_img

Latest News